ಬೆಂಗಳೂರು: ಸ್ವಾತಂತ್ರ್ಯ ಹೋರಾಟ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ 'ಹರ್ ಘರ್ ತಿರಂಗ' ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.
ಶಿವಾಜಿನಗರದ ವಸಂತನಗರ ವಾರ್ಡಿನ ಬೂತ್ ನಂ. 44ರಲ್ಲಿ ಮಂಗಳವಾರ ಬೆಳಿಗ್ಗೆ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗಾರರ ಜತೆ ಮಾತನಾಡಿದರು.
'ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ‘ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು; ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನು ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು’ ಎಂದು ತಿಳಿಸಿದ್ದಾರೆ. ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ’ ಎಂದು ಅವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಮೋಹನ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೂತ್ ಸಂಖ್ಯೆ 44 ಅಧ್ಯಕ್ಷ ಸಾಗರ್ ಮತ್ತು ಇತರರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಅಲ್ಲದೇ, ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಬೈಕ್‌ಗಳ ಮೂಲಕ ತಿರಂಗಯಾತ್ರೆ ಆಯೋಜಿಸಲಾಗಿದೆ ಎಂದು ಹೇಳಿದರು.
ಇದೇ 15ರವರೆಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಗಳು, ಪುತ್ಥಳಿಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ದೇಶ ವಿಭಜನೆಯ ಕರಾಳ ದಿನದ ನೆನಪನ್ನು ವಿಭಜನೆಯ ಸ್ಮೃತಿ ದಿನವಾಗಿ ನೆನಪಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.