ಬೆಂಗಳೂರು: ಮಲ್ಲೇಶ್ವರದ ಮಂತ್ರಿ ಮಾಲ್ ಬಳಿ ನಿರ್ಮಾಣವಾಗುತ್ತಿರುವ ರಾಜೀವ್ ಗಾಂಧಿ ಪ್ರತಿಮೆಗೆ ರಾಜ್ಯ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ಮಂಗಳವಾರ ಈ ಕುರಿತು ಬಿಜೆಪಿ ತನ್ನ X ಖಾತೆಯಲ್ಲಿ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದೆ.
‘ರಾಜ್ಯದಲ್ಲಿ ಅಭಿವೃದ್ಧಿಗೆ ಹಣವನ್ನೇ ಕೇಳಬೇಡಿ ಎಂದು ಸಿದ್ದರಾಮಯ್ಯ ಅವರ ಸರ್ಕಾರ ಈಗಾಗಲೇ ತನ್ನ ಸಂಪುಟಕ್ಕೆ ಕಟ್ಟಾಜ್ಞೆ ಹೊರಡಿಸಿದೆ. ರೈತರಿಗೆ ಬರ ಪರಿಹಾರ ಕೊಡಲೂ ಅವರ ಬಳಿ ಹಣವಿಲ್ಲ. ಹೀಗಿರುವಾಗಲೂ ಕೋಟಿಗೂ ಅಧಿಕ ಖರ್ಚು ಮಾಡಿ, ಕರ್ನಾಟಕಕ್ಕೆ ಯಾವುದೇ ಸಂಬಂಧವಿರದ ರಾಜೀವ್ ಗಾಂಧಿ ಪ್ರತಿಮೆ ನಿರ್ಮಾಣ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ? ಇದಕ್ಕೆ ಕಾಂಗ್ರೆಸ್ಸಿಗರ ಬಳಿ ಉತ್ತರವಿಲ್ಲ. ಸಾರ್ವಜನಿಕ ಸಂಪತ್ತನ್ನು ಗಾಂಧಿ ಕುಟುಂಬದ ಆಸ್ತಿ ಎಂಬಂತೆ ಖರ್ಚು ಮಾಡುವ ಮನಸ್ಥಿತಿಯನ್ನು ಮೊದಲು ಕೆಡವಬೇಕಿದೆ' ಎಂದು ವಾಗ್ದಾಳಿ ನಡೆಸಿದೆ.
ಮಲ್ಲೇಶ್ವರದ ಮಂತ್ರಿ ಮಾಲ್ ಬಳಿ ರಾಜೀವ್ ಗಾಂಧಿ ಪ್ರತಿಮೆ ನಿರ್ಮಾಣ ಕಾಮಗಾರಿ ಕಳೆದ ಕೆಲ ತಿಂಗಳುಗಳಿಂದ ಪ್ರಗತಿಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.