ADVERTISEMENT

ಸಲುಗೆ ಫೋಟೊ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್: ದಂಪತಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2024, 0:25 IST
Last Updated 27 ಜನವರಿ 2024, 0:25 IST
   

ಬೆಂಗಳೂರು: ವ್ಯಕ್ತಿಯೊಬ್ಬರ ಜೊತೆ ಸಲುಗೆಯಿಂದ ವರ್ತಿಸಿ ಫೋಟೊ ಕ್ಲಿಕ್ಕಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದಡಿ ದಂಪತಿಯನ್ನು ಪೂರ್ವ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಹಲಸೂರು ನಿವಾಸಿಯೊಬ್ಬರು ನೀಡಿದ್ದ ದೂರು ಆಧರಿಸಿ ಗುಜರಾತ್‌ನ ದಂಪತಿಯನ್ನು ಹಲಸೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಪುಲಿಕೇಶಿನಗರ ಠಾಣೆಗೆ ವರ್ಗಾಯಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಪತಿ ಹಾಗೂ ಪತ್ನಿ, ರಾಜ್ಯದಿಂದ ರಾಜ್ಯಕ್ಕೆ ಸುತ್ತಾಡುತ್ತಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಕಟಿಸುತ್ತಿದ್ದ ಪತಿ, ಗ್ರಾಹಕರನ್ನು ವೇಶ್ಯಾವಾಟಿಕೆಗೆ ಆಹ್ವಾನಿಸುತ್ತಿದ್ದರು. ಅಂಥ ವ್ಯಕ್ತಿಗಳ ಜೊತೆ ಪತ್ನಿ ಸಲುಗೆಯಿಂದ ವರ್ತಿಸಿ ಹಣ ಪಡೆದುಕೊಳ್ಳುತ್ತಿದ್ದಳು’ ಎಂದು ತಿಳಿಸಿವೆ.

ADVERTISEMENT

‘ಬೆಂಗಳೂರಿಗೆ ಇತ್ತೀಚೆಗೆ ಬಂದಿದ್ದ ದಂಪತಿಯನ್ನು ದೂರುದಾರ ಸಂಪರ್ಕಿಸಿದ್ದರು. ದೂರುದಾರರ ಜೊತೆ ಸಲುಗೆಯಿಂದ ವರ್ತಿಸಿದ್ದ ಪತ್ನಿ, ಫೋಟೊ ಕ್ಲಿಕ್ಕಿಸಿಕೊಂಡಿದ್ದಳು. ಅದೇ ಫೋಟೊವನ್ನು ದೂರುದಾರರಿಗೆ ತೋರಿಸಿದ್ದ ದಂಪತಿ, ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾರಂಭಿಸಿದ್ದರು. ಹಣ ನೀಡಲು ಒಪ್ಪದ ವ್ಯಕ್ತಿ ಠಾಣೆಗೆ ದೂರು ನೀಡಿದ್ದರು. ತಾಂತ್ರಿಕ ಪುರಾವೆಗಳನ್ನು ಆಧರಿಸಿ ದಂಪತಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.