ADVERTISEMENT

ಎಚ್‌.ಎನ್.ಆನಂದ್‌ಗೆಬಿ.ಎಂ.ಶ್ರೀ ಪ್ರತಿಷ್ಠಾನ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2022, 17:36 IST
Last Updated 3 ಫೆಬ್ರುವರಿ 2022, 17:36 IST
ಎಚ್‌.ಎನ್. ಆನಂದ್
ಎಚ್‌.ಎನ್. ಆನಂದ್   

ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನ ನೀಡುವ 2022ನೇ ಸಾಲಿನ ‘ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ’ಗೆ ಪತ್ರಕರ್ತ ಎಚ್‌.ಎನ್. ಆನಂದ್ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ನೇತೃತ್ವದ ಸಮಿತಿಯು ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಸ್ಮರಣ ಫಲಕವನ್ನು ಒಳಗೊಂಡಿದೆ.

ಪತ್ರಿಕಾರಂಗ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಎಚ್.ಎನ್. ಆನಂದ್ ಅವರು ‘ಪ್ರಜಾವಾಣಿ’ಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. 1970-80ರ ದಶಕದಲ್ಲಿ ‘ಸುಧಾ’ ವಾರಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದ ಅವರು, ಕನ್ನಡ ನಿಯತಕಾಲಿಕೆಯಲ್ಲಿ ‘ಕವರ್ ಸ್ಟೋರಿ’ ಪರಿಕಲ್ಪನೆಯನ್ನು ಪರಿಚಯಿಸಿದ್ದರು. ಅಲ್ಲಿ ಅವರು ಬರೆಯುತ್ತಿದ್ದ ‘ವಾರೆನೋಟ’ ಅಂಕಣ ಮೊನಚಾದ ಹಾಸ್ಯ ಮತ್ತು ವಿಡಂಬನೆಯಿಂದ ಪ್ರಸಿದ್ಧವಾಗಿತ್ತು.ಅದಕ್ಕೂ ಮೊದಲು ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ

ADVERTISEMENT

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಪ್ರಕಟಣಾ ವಿಭಾಗದಲ್ಲೂ ಕೆಲಕಾಲ ಅವರು ಕಾರ್ಯನಿರ್ವಹಿಸಿದ್ದಾರೆ. ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಬಿ.ಎಂ.ಶ್ರೀ. ಕಲಾಭವನದಲ್ಲಿ ಪ್ರಶಸ್ತಿ ಪ‍್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.