ಪ್ರಜಾವಾಣಿ ವಾರ್ತೆ
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಹಾಗೂ ಪಲ್ಸರ್ ಬೈಕ್ ನಡುವೆ ಅಪಘಾತ ಉಂಟಾಗಿ ಇಬ್ಬರು ಮೃತಪಟ್ಟಿದ್ದಾರೆ.
ಕಲಬುರಗಿಯ ರಮೇಶ್ (41) ಹಾಗೂ ಚಿಕ್ಕಜಾಲದ ನಬಿ (35) ಮೃತಪಟ್ಟವರು. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಸಾದರಹಳ್ಳಿ ಗೇಟ್ ಬಳಿ ಶನಿವಾರ ರಾತ್ರಿ ಅಪಘಾತವಾಗಿತ್ತು.
ರಮೇಶ್ ಕ್ಯಾಂಟರ್ ಚಾಲಕರಾಗಿ, ನಬಿ ಆಟೊ ಚಾಲಕರಾಗಿದ್ದು, ಚಿಕ್ಕಜಾಲದಲ್ಲಿ ವಾಸವಾಗಿದ್ದರು. ಮೆಜೆಸ್ಟಿಕ್ನಿಂದ ವಿಮಾನ ನಿಲ್ದಾಣ ಕಡೆಗೆ ತೆರಳುತ್ತಿದ್ದ ವಿದ್ಯುತ್ ಚಾಲಿತ ಬಿಎಂಟಿಸಿ ಬಸ್ ಸಾದರಹಳ್ಳಿ ಗೇಟ್ ಬಳಿಯ ಪೆಟ್ರೋಲ್ ಬಂಕ್ ಹತ್ತಿರ ಬೈಕ್ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಪರೀಕ್ಷಿಸಿ, ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಟ್ರಕ್ ಚಾಲಕ ಸಾವು: ಎಚ್ಎಸ್ಆರ್ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ 19ನೇ ಮುಖ್ಯರಸ್ತೆಯಲ್ಲಿ ಭಾನುವಾರ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಟ್ರಕ್ ಚಾಲಕ ಮೃತಪಟ್ಟಿದ್ದಾರೆ.
ನೆಲಗಮಂಗಲ ನಿವಾಸಿ ಮಂಜುನಾಥ್ (47) ಮೃತ ವ್ಯಕ್ತಿ. ವೇಗವಾಗಿ ಬಂದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಗಾಯಾಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.