ADVERTISEMENT

ಮೊಬೈಲ್‌ ಆ್ಯಪ್‌ನಲ್ಲಿ ಬಿಎಂಟಿಸಿ ಪಾಸ್‌ ಲಭ್ಯ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 15:50 IST
Last Updated 30 ಆಗಸ್ಟ್ 2024, 15:50 IST
ಬಿಎಂಟಿಸಿ
ಬಿಎಂಟಿಸಿ   

ಬೆಂಗಳೂರು: ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳನ್ನು ಮೊಬೈಲ್ ಆ್ಯಪ್ ಮೂಲಕ ವಿತರಿಸಲು ಬಿಎಂಟಿಸಿ ಕ್ರಮ ಕೈಗೊಂಡಿದೆ.

ಪ್ರಯಾಣಿಕರಿಗೆ ಪಾಸುಗಳು ಸುಲಭವಾಗಿ ದೊರೆಯಲು ಹಾಗೂ ನಗದು ರಹಿತ, ಕಾಗದ ರಹಿತ ಮತ್ತು ಸಂಪರ್ಕ ರಹಿತ ವಹಿವಾಟಿಗಾಗಿ, ಸೆಪ್ಟೆಂಬರ್‌ 15ರಿಂದ ಅನ್ವಯವಾಗುವಂತೆ ಡಿಜಿಟಲ್ ವ್ಯವಸ್ಥೆಯಲ್ಲಿ ಪಾಸುಗಳ ವಿತರಣೆಯಾಗಲಿದೆ.

ಮೊಬೈಲ್‌ನಲ್ಲಿ ಪ್ಲೇಸ್ಟೋರ್‌ಗೆ ಹೋಗಿ ಟುಮ್ಯಾಕ್‌ ಆ್ಯಪ್‌ (Tummoc App) ಡೌನ್ಲೋಡ್‌ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಬೇಕು. ಪಾಸ್‌ ಆಯ್ಕೆ ಮಾಡಿಕೊಂಡು ವಿವರ ಭರ್ತಿ ಮಾಡಿ ಭಾವಚಿತ್ರ ಸಹಿತ ಅಪ್‌ಲೋಡ್‌ ಮಾಡಬೇಕು. ದೃಢೀಕರಣಗೊಂಡ ಬಳಿಕ ಪಾಸ್‌ ಮೊತ್ತ ಪಾವತಿಸಬೇಕು.

ADVERTISEMENT

ದೈನಿಕ ಪಾಸುಗಳನ್ನು ಇ.ಟಿ.ಎಂ ಯಂತ್ರದ ಮೂಲಕ ನಿರ್ವಾಹಕರಿಂದ ಪಡೆದುಕೊಳ್ಳಬಹುದು. ಮಾಹಿತಿಗಾಗಿ https://mybmtc.karnataka.gov.in ಸಂಪರ್ಕಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.