ADVERTISEMENT

ಕಾಲೇಜಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ: ಮಾಹಿತಿ ಕೋರಿ ಮೈಕ್ರೋಸಾಫ್ಟ್‌ಗೆ ಪತ್ರ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2024, 23:30 IST
Last Updated 6 ಅಕ್ಟೋಬರ್ 2024, 23:30 IST
<div class="paragraphs"><p>ಬಾಂಬ್ ಬೆದರಿಕೆ</p></div>

ಬಾಂಬ್ ಬೆದರಿಕೆ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ನಗರದ ದಕ್ಷಿಣ ವಿಭಾಗದ ಮೂರು ಕಾಲೇಜುಗಳಿಗೆ ಏಕಕಾಲಕ್ಕೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ನಕಲಿ ವಿಪಿಎನ್ ಬಳಸಿ ಇ–ಮೇಲ್ ಕಳುಹಿಸಿರುವುದನ್ನು ಪತ್ತೆ ಮಾಡಿದ್ದಾರೆ.

ADVERTISEMENT

ಹನುಮಂತನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಎಂಎಸ್‌ ಕಾಲೇಜು, ವಿಶ್ವೇಶ್ವರಪುರದ ಬಿಐಟಿ ಕಾಲೇಜು ಹಾಗೂ ಸದಾಶಿವನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಎಂಎಸ್‌ಆರ್‌ಐಟಿ ಕಾಲೇಜುಗಳಿಗೂ ಒಂದೇ ಇ–ಮೇಲ್‌ ವಿಳಾಸದಿಂದ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು. 

ಸ್ಥಳಕ್ಕೆ ತೆರಳಿದ ಬಾಂಬ್‌ ನಿಷ್ಕ್ರಿಯ ದಳ, ಬಾಂಬ್‌ ತಪಾಸಣೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾಲೇಜು ಆವರಣದಲ್ಲಿ ಪರಿಶೀಲನೆ ನಡೆಸಿದ್ದರು. ಯಾವುದೇ ಸ್ಫೋಟಕ ವಸ್ತುಗಳಾಗಲಿ, ರಾಸಾಯನಿಕ ಪದಾರ್ಥಗಳಾಗಲಿ ಪತ್ತೆ ಆಗಿರಲಿಲ್ಲ. ಸಂದೇಶ ಕಳುಹಿಸಲು ನಕಲಿ ವಿಪಿಎನ್ ಬಳಸಿದ್ದರಿಂದ ಆರೋಪಿಗಳ ಪತ್ತೆ ಪೊಲೀಸರಿಗೆ ಸವಾಲಾಗಿದೆ. 

ಬೆದರಿಕೆ ಸಂದೇಶ ಬಂದಿದ್ದ ಇ–ಮೇಲ್‌ಗಳ ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ಸ್‌ (ವಿಪಿಎನ್‌) ಹಾಗೂ ಇಂಟರ್‌ನೆಟ್ ಪ್ರೋಟೊಕಾಲ್ (ಐ.ಪಿ) ವಿಳಾಸದ ಮಾಹಿತಿ ನೀಡುವಂತೆ ಕೋರಿ ಮೈಕ್ರೋಸಾಫ್ಟ್‌ ಕಂಪನಿಗೆ ಪೊಲೀಸರು ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.