ಬೆಂಗಳೂರು: ನಗರದ ಮೂರು ಪಂಚತಾರಾ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದ್ದು, ಪೊಲೀಸರು ಹೋಟೆಲ್‌ಗಳಲ್ಲಿ ಗುರುವಾರ ತೀವ್ರ ಶೋಧ ನಡೆಸಿದರು.
‘ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯಲ್ಲಿರುವ ದಿ ಒಟೆರಾ, ಒಬೆರಾಯ್ ಗ್ರೂಪ್ ಹಾಗೂ ಐಎಚ್‌ಸಿಎಲ್ ಟಾಟಾ ಪಂಚತಾರಾ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಹೋಟೆಲ್‌ಗಳಿಗೆ ಹೋಗಿ ತಪಾಸಣೆ ನಡೆಸಲಾಯಿತು. ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಗಲಿಲ್ಲ’ ಎಂದು ಪೊಲೀಸರು ಹೇಳಿದರು.
‘ಮೂರು ಹೋಟೆಲ್‌ಗಳ ಇ–ಮೇಲ್‌ಗೆ ಗುರುವಾರ ನಸುಕಿನಲ್ಲಿ ಇ–ಮೇಲ್ ಬಂದಿತ್ತು. ಗಾಬರಿಗೊಂಡ ಹೋಟೆಲ್ ಸಿಬ್ಬಂದಿ, ಠಾಣೆಗೆ ಮಾಹಿತಿ ನೀಡಿದ್ದರು. ಕೆಲ ನಿಮಿಷಗಳಲ್ಲಿ ಸ್ಥಳಕ್ಕೆ ಹೋಗಿದ್ದ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ, ಗ್ರಾಹಕರು ಹಾಗೂ ಸಿಬ್ಬಂದಿಯಿಂದ ಹೋಟೆಲ್‌ನಿಂದ ಹೊರಗೆ ಕಳುಹಿಸಿ ತಪಾಸಣೆ ನಡೆಸಿದರು. ಇದೊಂದು ಹುಸಿ ಬೆದರಿಕೆ ಎಂಬುದು ಗೊತ್ತಾಗುತ್ತಿದ್ದಂತೆ ಸಿಬ್ಬಂದಿ ಹಾಗೂ ಗ್ರಾಹಕರು ನಿಟ್ಟುಸಿರು ಬಿಟ್ಟರು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.