ADVERTISEMENT

‘ವಿಶ್ವ ಸಂಸ್ಕೃತಿಯ ಮಹಾಯಾನ’ ಗದ್ಯ ಕಾವ್ಯ ಬಿಡುಗಡೆ ಮಾರ್ಚ್ 2ಕ್ಕೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 16:29 IST
Last Updated 28 ಫೆಬ್ರುವರಿ 2024, 16:29 IST

ಬೆಂಗಳೂರು: ಸಪ್ನ ಬುಕ್‌ ಹೌಸ್‌ ವತಿಯಿಂದ  ಮಾರ್ಚ್‌ 2ರಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ರಚಿಸಿರುವ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಗದ್ಯ ಮಹಾಕಾವ್ಯ ಕೃತಿಯು ಚಿಕ್ಕಬಳ್ಳಾಪುರದ ಎಸ್‌ಜೆಸಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಡುಗಡೆ ಆಗಲಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ. ವೀರಪ್ಪ ಮೊಯಿಲಿ, ‘ವಿಶ್ವ ಸಂಸ್ಕೃತಿಯ ಮಹಾಯಾನ ಗದ್ಯ ಕಾವ್ಯವೂ ನಾಲ್ಕು ಸಂಪುಟಗಳಲ್ಲಿ ಬರಲಿದೆ. ಸದ್ಯ ಮೊದಲ ಸಂಪುಟ ಮಾರ್ಚ್‌ 2ರಂದು ಬಿಡುಗಡೆಯಾಗಲಿದೆ‘ ಎಂದರು.

‘ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ ಪುಸ್ತಕದ ಕುರಿತು ಮಾತನಾಡಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

ಶಿಕ್ಷಣ ತಜ್ಞ ಕೆ.ಇ. ರಾಧಾಕೃಷ್ಣ, ಸಂಘಟನಾ ಸಮಿತಿ ಅಧ್ಯಕ್ಷ ರಮೇಶ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಸಪ್ನ ಬುಕ್‌ ಹೌಸ್‌ನ ವ್ಯವಸ್ಥಾಪಕ ನಿರ್ದೇಶಕ ನಿತಿನ್‌ ಷಾ, ಆಂಜನಪ್ಪ, ಕಮಲೇಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.