ADVERTISEMENT

ಪುಸ್ತಕ ಮಾರಾಟದ ಸರಕಲ್ಲ, ಸಂಸ್ಕೃತಿ: ಕರೀಗೌಡ ಬೀಚನಹಳ್ಳಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2023, 15:30 IST
Last Updated 17 ಅಕ್ಟೋಬರ್ 2023, 15:30 IST
ಕಾರ್ಯಕ್ರಮದಲ್ಲಿ ಕರೀಗೌಡ ಬೀಚನಹಳ್ಳಿ ಅವರನ್ನು ನಿಡಸಾಲೆ ಪುಟ್ಟಸ್ವಾಮಯ್ಯ ಹಾಗೂ ಸಂಘದ ಕಾರ್ಯದರ್ಶಿ ಆರ್. ದೊಡ್ಡೆಗೌಡ ಸನ್ಮಾನಿಸಿದರು. ಬಹುಭಾಷಾ ವಿದ್ವಾಂಸ ಮಲ್ಲೇಪುರಂ ಜಿ. ವೆಂಕಟೇಶ್ ಹಾಗೂ ಕನ್ನಡ ಪರ ಹೋರಾಟಗಾರ ರಾ.ನಂ. ಚಂದ್ರಶೇಖರ್ ಇದ್ದಾರೆ. 
ಕಾರ್ಯಕ್ರಮದಲ್ಲಿ ಕರೀಗೌಡ ಬೀಚನಹಳ್ಳಿ ಅವರನ್ನು ನಿಡಸಾಲೆ ಪುಟ್ಟಸ್ವಾಮಯ್ಯ ಹಾಗೂ ಸಂಘದ ಕಾರ್ಯದರ್ಶಿ ಆರ್. ದೊಡ್ಡೆಗೌಡ ಸನ್ಮಾನಿಸಿದರು. ಬಹುಭಾಷಾ ವಿದ್ವಾಂಸ ಮಲ್ಲೇಪುರಂ ಜಿ. ವೆಂಕಟೇಶ್ ಹಾಗೂ ಕನ್ನಡ ಪರ ಹೋರಾಟಗಾರ ರಾ.ನಂ. ಚಂದ್ರಶೇಖರ್ ಇದ್ದಾರೆ.    

ಬೆಂಗಳೂರು: ‘ಪುಸ್ತಕ ಎನ್ನುವುದು ಸಂಸ್ಕೃತಿಯ ಭಾಗವೇ ಹೊರತು ಮಾರಾಟದ ಸರಕಲ್ಲ’ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯ ಮಟ್ಟದ ಪುಸ್ತಕ ಆಯ್ಕೆ‌ ಸಮಿತಿ ಅಧ್ಯಕ್ಷ ಕರೀಗೌಡ ಬೀಚನಹಳ್ಳಿ ತಿಳಿಸಿದರು. 

ಕರ್ನಾಟಕ ಕನ್ನಡ ಬರಹಗಾರರ ಹಾಗೂ ಪ್ರಕಾಶಕರ ಸಂಘವು ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗೌರವ ಅಭಿನಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಮಾತನಾಡಿದರು. ‘ಪುಸ್ತಕವನ್ನು ಉದ್ಯಮವನ್ನಾಗಿ ಮಾತ್ರ ನೋಡದೆ, ಅದನ್ನು ಸಂಸ್ಕೃತಿಯ ಭಾಗವಾಗಿ ನೋಡುವಂತೆ ಮಾಡಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ. ಅದಕ್ಕಾಗಿ ಪುಸ್ತಕದ ಗುಣಮಟ್ಟ, ಉತ್ಪಾದನೆಯ ಮೌಲ್ಯ ಹೆಚ್ಚುವಂತೆ ಮಾಡಬೇಕು’ ಎಂದು ತಿಳಿಸಿದರು. 

ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ‘ಗ್ರಂಥಾಲಯಗಳಲ್ಲಿ ಹೊಸ ಪುಸ್ತಕಗಳನ್ನು ಸೇರ್ಪಡೆ ಮಾಡುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಪುಸ್ತಕ ಖರೀದಿಯಲ್ಲಿ ಆಗುತ್ತಿರುವ ವಿಳಂಬ. ಇದರೊಂದಿಗೆ ಪುಸ್ತಕ ಪ್ರಕಾಶನ ರಂಗ ಎದುರಿಸುತ್ತಿರುವ ಹಲವು ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸಬೇಕಾಗಿದೆ. ಪುಟಕ್ಕೆ ₹ 40 ಪೈಸೆ ನಿಗದಿ ಮಾಡಬೇಕೆನ್ನುವ ಮನವಿ ನನೆಗುದಿಗೆ ಬಿದ್ದಿದೆ’ ಎಂದು ಕಳವಳ ವ್ಯಕ್ತಪಡಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.