ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು, ಮಿದುಳು ನಿಷ್ಕ್ರಿಯಗೊಂಡಿದ್ದ 36 ವರ್ಷದ ವ್ಯಕ್ತಿಯೊಬ್ಬರು ಅಂಗಾಂಗ ದಾನದ ಮೂಲಕ ನಾಲ್ವರಿಗೆ ನೆರವಾಗಿದ್ದಾರೆ.
ಚಿಕ್ಕಬಳ್ಳಾಪುರದ ಗೌರಿಬಿದನೂರಿನ ನಿವಾಸಿಯಾದ ಅವರು, ಡಿ.16ರಂದು ಅಪಘಾತಕ್ಕೆ ಒಳಗಾಗಿದ್ದರು. ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಿ, ಅದೇ ದಿನ ಸಂಜೆ ಯಶವಂತಪುರದ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನ ಜೀವರಕ್ಷಕ ಸಾಧನದ ನೆರವಿನಿಂದ ಬದುಕಿದ್ದರು. ಡಿ.19ರಂದು ಅವರ ಮಿದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಲಾಯಿತು.
ಕುಟುಂಬದ ಸದಸ್ಯರು ಅಂಗಾಂಗಗಳ ದಾನ ಮಾಡಲು ನಿರ್ಧರಿಸಿದರು. ಯಕೃತ್ತನ್ನು ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ, ಎಡಭಾಗದ ಮೂತ್ರಪಿಂಡವನ್ನು ಸಾಗರ್ ಆಸ್ಪತ್ರೆಗೆ, ಬಲಭಾಗದ ಮೂತ್ರಪಿಂಡವನ್ನು ಅಪೋಲೊ ಆಸ್ಪತ್ರೆಗೆ ನೀಡಲಾಗಿದೆ. ಕಣ್ಣುಗಳನ್ನು ನಾರಾಯಣ ನೇತ್ರಾಲಯದ ರಾಜ್‌ಕುಮಾರ್ ಐ ಬ್ಯಾಂಕ್‌ಗೆ ರವಾನಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.