ಬೆಂಗಳೂರು: ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ 53 ವರ್ಷದ ವ್ಯಕ್ತಿಗೆ ವೃತ್ತಿಯಲ್ಲಿ ವೈದ್ಯನಾಗಿರುವ 47 ವರ್ಷದ ಸಹೋದರ ಮೂತ್ರಪಿಂಡ ದಾನ ಮಾಡಿದ್ದು, ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಸಿ ಮಾಡಿದ್ದಾರೆ.
ವ್ಯಕ್ತಿಯು ಅಂತಿಮ ಹಂತದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಹೃದ್ರೋಗ ಸಮಸ್ಯೆ ಹೊಂದಿದ್ದರು. ದಾನಿಗಳು ದೊರೆಯದ ಹಿನ್ನೆಲೆಯಲ್ಲಿ ಸಹೋದರನೇ ಅಂಗಾಂಗ ದಾನಕ್ಕೆ ಮುಂದೆ ಬಂದರು.
‘ಸಹೋದರನ ಆರೋಗ್ಯ ಕ್ಷೀಣಿಸುತ್ತಿದ್ದ ಪರಿಣಾಮ ಕುಟುಂಬದ ಸದಸ್ಯರು ಚಿಂತೆಗೀಡಾಗಿದ್ದರು. ಕೊರೊನಾ ಸೋಂಕಿನ ಭೀತಿಯಿಂದಾಗಿ ಇನ್ನಷ್ಟು ಆತಂಕ ಉಂಟಾಗಿತ್ತು. ಈ ಸಂದರ್ಭದಲ್ಲಿ ದಾನಿಗಳಿಗಾಗಿ ಎದುರು ನೋಡುತ್ತಾ ಕುಳಿತಲ್ಲಿ ಸಮಸ್ಯೆ ಇನ್ನಷ್ಟು ಬಿಗಡಾಯಿಸಲಿದೆ ಎನ್ನುವುದನ್ನು ಅರಿತು, ನಾನೇ ಮೂತ್ರಪಿಂಡ ದಾನ ಮಾಡಿದೆ. ಈಗ ಅಣ್ಣ ಸುಧಾರಿಸಿಕೊಳ್ಳುತ್ತಿದ್ದಾರೆ’ ಎಂದು ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿಯ ಸಹೋದರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.