ದಾಬಸ್ ಪೇಟೆ: ಪರಿಸರ ಹಾಳು ಮಾಡುತ್ತಿರುವ ಪ್ಲಾಸ್ಟಿಕ್ ಅನ್ನು ಬಳಸದಂತೆ ನಾವೆಲ್ಲ ಸಂಕಲ್ಪ ಮಾಡುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಯೋಜನಾ ನಿರ್ದೇಶಕರಾದ ವಿಠಲ್ ಕಾವಳೆ ಸಲಹೆ ನೀಡಿದರು.
ಸೋಂಪುರ (ದಾಬಸ್ ಪೇಟೆ) ಪಟ್ಟಣದಲ್ಲಿ ಜಿಲ್ಲಾಡಳಿತ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಸೋಂಪುರ ಗ್ರಾಮ ಪಂಚಾಯಿತಿ ವತಿಯಿಂದ ಮಂಗಳವಾರ ನಡೆದ 'ಸ್ವಚ್ಛತೆಯೇ ಸೇವೆ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಾವು ಇಂದು ಪರಿಸರವವನ್ನು ಎಷ್ಟು ಸ್ವಚ್ಛವಾಗಿಟ್ಟುಕೊಳ್ಳುತ್ತೇವೋ, ಅದು ಮುಂದಿನ ಪೀಳಿಗೆಗೆ ಸಹಕಾರಿಯಾಗು ತ್ತದೆ. ತ್ಯಾಜ್ಯ ಮುಕ್ತ ಭಾರತಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕೆಂದು ಹೇಳಿದರು.
ನೆಲಮಂಗಲ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀ ನಾರಾಯಣಸ್ವಾಮಿ ಮಾತ ನಾಡಿ,‘ಪ್ಲಾಸ್ಟಿಕ್ ಬದಲು ಹತ್ತಿ ಬಟ್ಟೆ ಚೀಲವನ್ನು ಉಪಯೋಗಿಸಿ’ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ ಕುಮಾರ ಮಾತನಾಡಿ, ‘ಅತಿಯಾದ ಪ್ಲಾಸ್ಟಿಕ್ ಮನುಷ್ಯ ಸೇರಿದಂತೆ ಪರಿಸರ ದಲ್ಲಿನ ಎಲ್ಲಾ ಜೀವಸಂಕುಲಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅದಕ್ಕಾಗಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು’ ಎಂದರು.
ಸ್ವಚತೆಯೇ ಸೇವೆ ಕಾರ್ಯಕ್ರದಡಿ ಶಾಲಾ ಮಕ್ಕಳೊಂದಿಗೆ ಪಟ್ಟಣದ ಮಾರಮ್ಮ ದೇವಸ್ಥಾನದಿಂದ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ತ್ಯಾಜ್ಯ ಮುಕ್ತ ಭಾರತ ನಿರ್ಮಾಣದ ಘೋಷಣೆಯೊಂದಿಗೆ ಜಾಥಾ ಸಾಗಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಧಿಕಾರಿ ಎಂ.ಆರ್.ರಮೇಶ್, ಸೋಂಪುರ ಗ್ರಾಮ ಪಂಚಾಯತಿ ಪಿಡಿಓ ಎ.ಎಂ.ರವಿಶಂಕರ್, ಶಿವಗಂಗೆ ಪಿಡಿಓ ಗಿರೀಶ್ ಕುಮಾರ್, ಮಣ್ಣೆ ಪಿಡಿಓ ಚಿರಂಜೀವಿ, ಕಾರ್ಯದರ್ಶಿ ಎ.ಹನುಮಂತರಾಜು, ಪಂಚಾಯತಿ ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.