ADVERTISEMENT

ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವು; ಗುತ್ತಿಗೆದಾರನ ವಿರುದ್ಧ ಎಫ್‌ಐಆರ್‌

ನಿರ್ಲಕ್ಷ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 15:45 IST
Last Updated 24 ಜುಲೈ 2024, 15:45 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ತಮಿಳುನಾಡಿನ ಮುನಿರಾಜು (40) ಮೃತಪಟ್ಟ ಕಾರ್ಮಿಕ.

ADVERTISEMENT

‘ಆಸ್ಪತ್ರೆ ಆವರಣದಲ್ಲಿ ಒಂದು ಸಾವಿರ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದ ಮುನಿರಾಜು ಅವರು, ಮಂಗಳವಾರ ಸಂಜೆ ಕಟ್ಟಡದ 11ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ಆಯತಪ್ಪಿ ಮತ್ತೊಂದು ಮಹಡಿಗೆ ಬಿದ್ದರು. ಸ್ಥಳದಲ್ಲಿದ್ದವರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಸ್ಥಳಕ್ಕೆ ವಿಶ್ವೇಶ್ವರಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಸಂದರ್ಭದಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದ ಅಡಿ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.