ADVERTISEMENT

ಬ್ಯಾಟರಾಯನಪುರ: ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಒಗ್ಗಟ್ಟು ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2023, 23:51 IST
Last Updated 12 ಮಾರ್ಚ್ 2023, 23:51 IST
ಕೊಡಿಗೇಹಳ್ಳಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶಿಸಿದರು. ಸಂಸದ ಡಿ.ವಿ.ಸದಾನಂದಗೌಡ, ಶಾಸಕ ಎಸ್.ಆರ್.ವಿಶ್ವನಾಥ್, ಟಿಕೆಟ್ ಆಕಾಂಕ್ಷಿಗಳಾದ ಎ.ರವಿ, ಕೆ.ಎ.ಮುನೀಂದ್ರ ಕುಮಾರ್, ತಮ್ಮೇಶ್ ಗೌಡ, ಕೆ.ಎನ್.ಚಕ್ರಪಾಣಿ, ಕವಿಕಾ ಅಧ್ಯಕ್ಷ ದೊಡ್ಡಬಸವರಾಜು, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾರಾಯಣ, ಮುಖಂಡರಾದ ಪಿ.ಕೆ.ರಾಜಗೋಪಾಲ್, ಅಶ್ವಥ್‌ ನಾರಾಯಗೌಡ, ಟಿ.ಪಿ.ಪ್ರಕಾಶ್ ಇದ್ದರು.   

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದಲ್ಲಿ ಪಕ್ಷ ಟಿಕೆಟ್‌ ನೀಡುವ ಅಭ್ಯರ್ಥಿಯನ್ನೇ ಗೆಲ್ಲಿಸಲು ನಾಲ್ವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶಿಸಿದರು.

ಎ.ರವಿ, ಕೆ.ಎ.ಮುನೀಂದ್ರಕುಮಾರ್, ತಮ್ಮೇಶ್ ಗೌಡ ಹಾಗೂ ಕೆ.ಎನ್.ಚಕ್ರಪಾಣಿ ಪ್ರಬಲ ಆಕಾಂಕ್ಷಿಗಳಾಗಿ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

‘ಪಕ್ಷ ಯಾರಿಗೆ ಟಿಕೆಟ್‌ ನೀಡಿದರೂ ಉಳಿದವರೆಲ್ಲರೂ ಒಗ್ಗಟ್ಟಾಗಿ ಬೆಂಬಲ ನೀಡುತ್ತೇವೆ’ ಎಂದು ನಾಲ್ವರು ಕೊಡಿಗೇಹಳ್ಳಿಯಲ್ಲಿ ನಡೆದ ಸಭೆಯಲ್ಲಿ ಘೋಷಿಸಿದರು.

ADVERTISEMENT

ಶಾಸಕ ಎಸ್.ಆರ್.ವಿಶ್ವನಾಥ್ ಅವರು ನಾಲ್ವರೊಂದಿಗೆ ಸಭೆ ನಡೆಸಿ, ಎಲ್ಲರನ್ನೂ ಒಂದುಗೂಡಿಸುವ ಮೂಲಕ ಕಾರ್ಯಕರ್ತರ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಸಂಸದ ಡಿ.ವಿ.ಸದಾನಂದಗೌಡ ಅವರು, ‘ಟಿಕೆಟ್ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ. ಈಗಾಗಲೇ ಎರಡು ಹಂತದ ಸರ್ವೇ ಕಾರ್ಯ ನಡೆದಿದೆ‘ ಎಂದರು.

ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಇದು, ಗೆಲ್ಲುವ ಕ್ಷೇತ್ರ. ಕಾರ್ಯಕರ್ತರ ಶ್ರಮ ವ್ಯರ್ಥವಾಗಬಾರದೆಂಬ ಎಲ್ಲರನ್ನೂ ಒಂದೆಡೆ ಸೇರಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.