ADVERTISEMENT

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ: ಇಬ್ಬರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 22:00 IST
Last Updated 26 ಮಾರ್ಚ್ 2024, 22:00 IST
   

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು, ನಗರದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಾರ್ಚ್‌ 1ರಂದು ನಡೆದಿದ್ದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತನ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಅಧಿಕಾರಿಗಳು, ಆತನ ಜೊತೆ ಒಡನಾಟ ಹೊಂದಿದ್ದ ವ್ಯಕ್ತಿಗಳನ್ನು ಒಬ್ಬೊಬ್ಬರಾಗಿ ಪತ್ತೆ ಮಾಡುತ್ತಿದ್ದಾರೆ.

‘ಬಾಂಬ್ ಇರಿಸಿದ್ದ ಶಂಕಿತನ ಜೊತೆ ನಂಟು ಹೊಂದಿದ್ದ ಆರೋಪದಡಿ ನಗರದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಇವರಿಂದ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಹಲವರ ಪಟ್ಟಿ ಸಿದ್ಧಪಡಿಸಲಾಗಿದೆ. ಎಲ್ಲರಿಂದಲೂ ಹೇಳಿಕೆ ಪಡೆಯಲಾಗುವುದು’ ಎಂದು ತನಿಖಾ ತಂಡದ ಮೂಲಗಳು ಹೇಳಿವೆ.

ADVERTISEMENT

‘ವ್ಯವಸ್ಥಿತ ಸಂಚು ರೂಪಿಸಿ ಕೃತ್ಯ ಎಸಗಲಾಗಿದೆ. ಬಾಂಬ್ ಸ್ಫೋಟದ ನಂತರ ಶಂಕಿತ, ತಾನು ಅಂದುಕೊಂಡಂತೆ ನಿರ್ದಿಷ್ಟ ಜಾಗಕ್ಕೆ ತಲುಪಿದ್ದಾನೆ. ಆದರೆ, ಆ ಜಾಗ ಯಾವುದು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಹೀಗಾಗಿ, ಆತನ ಜೊತೆ ಒಡನಾಟ ಹೊಂದಿರುವ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.