ADVERTISEMENT

ಕ್ಯಾನ್ಸರ್ ಜಾಗೃತಿ ನಡಿಗೆ ಫೆ. 4ಕ್ಕೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2024, 14:49 IST
Last Updated 1 ಫೆಬ್ರುವರಿ 2024, 14:49 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯಾ ಇದೇ 4ರಂದು ಬೆಳಿಗ್ಗೆ 6 ಗಂಟೆಗೆ ಕಂಠೀರವ ಕ್ರೀಡಾಂಗಣದಿಂದ ‘ಕ್ಯಾನ್‌ ವಾಕ್’ ಜಾಗೃತಿ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದೆ. 

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯಾದ ಅಧ್ಯಕ್ಷ ಡಾ.ರಾಜಶೇಖರ್ ಸಿ. ಜಾಕ, ‘ಈ ಜಾಗೃತಿ ನಡಿಗೆಗೆ ನವೋದಯ ಇನ್ ಬೆಂಗಳೂರು, ಸಂಕಲ್ಪ ಚೇಸ್ ಕ್ಯಾನ್ಸರ್ ಫೌಂಡೇಷನ್ ರೀಸರ್ಚ್ ಟ್ರಸ್ಟ್ ಕೂಡ ಸಹಯೋಗ ನೀಡಿವೆ. 5 ಕಿ.ಮೀ. ನಡೆಯುವ ವಾಕಥಾನ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ವಾಕಥಾನ್ ಹಮ್ಮಿಕೊಂಡಿದ್ದೇವೆ’ ಎಂದು ಹೇಳಿದರು. 

ADVERTISEMENT

‘ಆರಂಭಿಕ ಹಂತದಲ್ಲಿಯೇ ಕ್ಯಾನ್ಸರ್ ಪತ್ತೆ ಮಾಡಿದಲ್ಲಿ ಸುಲಭವಾಗಿ ಕಾಯಿಲೆಯನ್ನು ವಾಸಿ ಮಾಡಬಹುದು. ಕ್ಯಾನ್ಸರ್ ರೋಗ ತಡೆಗೆ ಉತ್ತಮ ಆಹಾರ ಪದ್ಧತಿ ಮತ್ತು ಜೀವನಶೈಲಿ ಸಹಕಾರಿ. ಪ್ರತಿದಿನ ಯೋಗ, ವ್ಯಾಯಾಮದಂತಹ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು. ಪ್ರತಿ ಆರು ತಿಂಗಳಿಗೆ ಒಮ್ಮೆ ಸಂಪೂರ್ಣ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಈ ವಾಕಥಾನ್‌ಗೆ ಸಾರ್ವಜನಿಕರಿಗೆ ಪ್ರವೇಶ ಉಚಿತ ಇರುತ್ತದೆ’ ಎಂದು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.