ADVERTISEMENT

ಇಂದು, ನಾಳೆ 'ಕ್ಯಾನ್ಸರ್‌' ತಪಾಸಣೆ, ಜಾಗೃತಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2024, 0:30 IST
Last Updated 24 ಫೆಬ್ರುವರಿ 2024, 0:30 IST
ಕ್ಯಾನ್ಸರ್ ಜಾಗೃತಿ ಲೊಗೊ
ಕ್ಯಾನ್ಸರ್ ಜಾಗೃತಿ ಲೊಗೊ   

ಬೆಂಗಳೂರು: ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಶನಿವಾರ (ಫೆ.24) ಮತ್ತು ಭಾನುವಾರ(ಫೆ.25) ನಗರದ ಎಂ.ಜಿ. ರಸ್ತೆಯ ‘ನಮ್ಮ ಮೆಟ್ರೊ’ ನಿಲ್ದಾಣದ ಆವರಣದಲ್ಲಿ ‘ಕ್ಯಾನ್ಸರ್ ಎಕ್ಸ್‌ಪೊ’ ಹಮ್ಮಿಕೊಂಡಿದೆ. 

‘ಕ್ಯಾನ್ಸರ್‌ಗೆ ವಿದಾಯ ಹೇಳಿ, ಹೊಸ ಜೀವನಕ್ಕೆ ನಾಂದಿ ಹಾಡಿ’ ಎಂಬ ಶೀರ್ಷಿಕೆಯಡಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಉಚಿತವಾಗಿ ಕ್ಯಾನ್ಸರ್‌ ತಪಾಸಣೆ ಮಾಡಲಾಗುತ್ತದೆ. ನಗರದ ಪ್ರಮುಖ ಆಸ್ಪತ್ರೆಗಳ ಕ್ಯಾನ್ಸರ್ ತಜ್ಞರು ಪಾಲ್ಗೊಳ್ಳಲಿದ್ದು, ಅವರೊಂದಿಗೆ ಸಮಾಲೋಚನೆ ನಡೆಸುವ ಅವಕಾಶವೂ ಇರಲಿದೆ. 

ಬದಲಾದ ಜೀವನಶೈಲಿ, ಆಹಾರ ಪದ್ಧತಿ ಸೇರಿ ವಿವಿಧ ಕಾರಣಗಳಿಂದ ಕ್ಯಾನ್ಸರ್ ಪ್ರಕರಣಗಳು ನಗರದಲ್ಲಿ ಹೆಚ್ಚಳವಾಗುತ್ತಿವೆ. ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿದಲ್ಲಿ ಬೇಗ ಗುಣಮುಖ ಮಾಡಬಹುದಾಗಿದೆ. ಕ್ಯಾನ್ಸರ್‌ ಲಕ್ಷಣಗಳು, ಚಿಕಿತ್ಸೆ ಹಾಗೂ ಹೊಸ ಆವಿಷ್ಕಾರಗಳ ಬಗ್ಗೆ ವೈದ್ಯಕೀಯ ತಜ್ಞರು ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಿದ್ದಾರೆ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.