ADVERTISEMENT

ನಾರಾಯಣ ಗೌಡ ವಿರುದ್ಧದ ಪ್ರಕರಣ ರದ್ದು: ಪುನರ್ ವಿಚಾರಣೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 31 ಮೇ 2022, 19:39 IST
Last Updated 31 ಮೇ 2022, 19:39 IST

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ಮೇಳೆ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಸಿ. ನಾರಾಯಣ ಗೌಡ ವಿರುದ್ಧ ಕೆ.ಆರ್.ಪೇಟೆ ಠಾಣೆ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಮತ್ತು ಪ್ರಕರಣ ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಕುರಿತಂತ ಕೆ.ಸಿ.ನಾರಾಯಣ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

'ಪ್ರಕರಣವನ್ನು ಪುನಃ ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಲಾಗುತ್ತದೆ. ಮಾಹಿತಿದಾರರು ಮ್ಯಾಜಿಸ್ಟ್ರೇಟ್ ಕೊರ್ಟ್‌ಗೆ ಹಾಜರಾಗಿ ತನಿಖೆಗೆ ಅನುಮತಿ ನೀಡುವಂತೆ ಕೋರುವ ಹಂತದಿಂದ ಪ್ರಕರಣವನ್ನು ಹೊಸದಾಗಿ ಕಾನೂನು ಪ್ರಕಾರ ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಬೇಕು' ಎಂದು ನ್ಯಾಯಪೀಠ ನಿರ್ದೇಶಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.