ಬೆಂಗಳೂರು: ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರು ಯುವಕರ ವಿರುದ್ಧ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ವ್ಹೀಲಿಂಗ್ ಮಾಡುವವರನ್ನು ಪತ್ತೆ ಮಾಡಲು ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೆಂಗೇರಿ ಪೊಲೀಸರು ನಾಲ್ವರನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ’ ಎಂದು ಸಂಚಾರ ವಿಭಾಗದ (ಪಶ್ಚಿಮ) ಡಿಸಿಪಿ ಅನಿತಾ ಹದ್ದಣ್ಣವರ್ ತಿಳಿಸಿದರು.
‘ಸಾರ್ವಜನಿಕ ರಸ್ತೆಯಲ್ಲಿ ವ್ಹೀಲಿಂಗ್ ಮಾಡುವ ಯುವಕರ ವರ್ತನೆಯಿಂದ ಜನರ ಜೀವಕ್ಕೆ ಆಪತ್ತು ಹೆಚ್ಚು. ಇದೇ ಕಾರಣಕ್ಕೆ ಯುವಕರ ವಿರುದ್ಧ ಐಪಿಸಿ 279 (ಅತಿ ವೇಗದ ಚಾಲನೆ) ಅಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ವ್ಹೀಲಿಂಗ್ ಮಾಡದಂತೆ ಮುಚ್ಚಳಿಕೆ ಸಹ ಬರೆಸಿಕೊಳ್ಳಲಾಗಿದೆ’ ಎಂದು ಹೇಳಿದರು.
‘ವ್ಹೀಲಿಂಗ್ ವಿರುದ್ಧದ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ. ಸಾರ್ವಜನಿಕರು ಸಹ ಪೊಲೀಸರಿಗೆ ಮಾಹಿತಿ ನೀಡಬಹುದು’ ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.