ಬೆಂಗಳೂರು: ನಗರದಲ್ಲಿ ಬೈಕ್ ವ್ಹೀಲಿಂಗ್ ನಿಯಂತ್ರಿಸಲು ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು, 8 ಯುವಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಕಾಮಾಕ್ಷಿಪಾಳ್ಯ, ವಿಜಯನಗರ ಹಾಗೂ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ವ್ಹೀಲಿಂಗ್ ಮಾಡುತ್ತಿದ್ದ ಎಂಟು ಯುವಕರನ್ನು ವಶಕ್ಕೆ ಪಡೆದು, ಅವರ 7 ಬೈಕ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಸಾರ್ವಜನಿಕರ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ವರ್ತನೆಯಿಂದ ಸಾರ್ವಜನಿಕರು ಭಯದಲ್ಲಿದ್ದರು. ವ್ಹೀಲಿಂಗ್ ಬಗ್ಗೆ ಕೆಲವರು ದೂರು ಸಹ ನೀಡಿದ್ದರು. ಹೀಗಾಗಿ, ಈ ಕಾರ್ಯಾಚರಣೆ ನಡೆಸಲಾಯಿತು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.