ಬೆಂಗಳೂರು: ಕನ್ನಡದ ಮನೋರಂಜನಾ ವಾಹಿನಿಯೊಂದು ಇತ್ತೀಚೆಗೆ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಲಾವಿದರೊಬ್ಬರು ಭೋವಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದ್ದು, ನಾಲ್ವರ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಹಾಸ್ಯ ಕಲಾವಿದ ಕಾರ್ತಿಕ್ ಅಲಿಯಾಸ್ ಹುಲಿ ಕಾರ್ತಿಕ್, ಸಂಭಾಷಣೆಕಾರ, ಕಾರ್ಯಕ್ರಮದ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
‘ಸೆ.20ರಿಂದ 22ರ ವರೆಗೆ ಪ್ರತಿದಿನ ಸಂಜೆ 7 ಗಂಟೆಗೆ ಕಾರ್ಯಕ್ರಮ ಪ್ರಸಾರವಾಗಿತ್ತು. ಈ ಕಾರ್ಯಕ್ರಮದಲ್ಲಿ ಭೋವಿ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕೆ.ಆರ್. ಪುರ ಸಮೀಪದ ದೇವಸಂದ್ರದ ನಿವಾಸಿ ಎಸ್.ಲೋಕೇಶ್ ಅವರು ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.