ಬೆಂಗಳೂರು: ಕಲ್ಕೆರೆಯ ಪುಣ್ಯಭೂಮಿ ಬಡಾವಣೆಯ ನಿರ್ಜನ ಪ್ರದೇಶದಲ್ಲಿ ಜೂಜು ಆಡುತ್ತಿದ್ದ 9 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ₹ 70 ಸಾವಿರ ನಗದು ಜಪ್ತಿ ಮಾಡಿದ್ದಾರೆ.
‘ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿರುವ ಪ್ರದೇಶದಲ್ಲಿ ಸ್ಥಳೀಯರು ಜೂಜು ಆಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.