ADVERTISEMENT

ಮೀಟರ್ ಬಡ್ಡಿ ಲೇವಾದೇವಿದಾರರ ಕಚೇರಿಗಳ ಮೇಲೆ ಸಿಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2023, 15:35 IST
Last Updated 13 ನವೆಂಬರ್ 2023, 15:35 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಬೆಂಗಳೂರು: ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ನಗರದ ನಾಲ್ವರು ಲೇವಾದೇವಿದಾರರ ಕಚೇರಿ ಹಾಗೂ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ನಗದು ಸೇರಿದಂತೆ ₹ 42.42 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಲೇವಾದೇವಿ ನಿಬಂಧಕ ಅಧಿಕಾರಿಗಳ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದರು.

ADVERTISEMENT

‘ಬಸವನಗುಡಿ, ಚಾಮರಾಜಪೇಟೆ, ಕಾಮಾಕ್ಷಿಪಾಳ್ಯ ಹಾಗೂ ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಮೀಟರ್ ಬಡ್ಡಿ ದಂಧೆ ನಡೆಯುತ್ತಿತ್ತು ಎಂಬುದಕ್ಕೆ ಸಾಕಷ್ಟು ಪುರಾವೆಗಳು ಸಿಕ್ಕವು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

‘ಅನಧಿಕೃತವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿಯೊಬ್ಬ ಪರಾರಿಯಾಗಿದ್ದಾನೆ. ಉಳಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

‘₹ 23.42 ಲಕ್ಷ ನಗದು, ₹ 7 ಲಕ್ಷ ಮೌಲ್ಯದ ಚಿನ್ನಾಭರಣ, ₹ 9 ಲಕ್ಷ ಮೌಲ್ಯದ ಬೆಳ್ಳಿ ಸಾಮಗ್ರಿ, ₹ 3 ಲಕ್ಷ ಮೌಲ್ಯದ 6 ರೂಲೆಕ್ಸ್ ವಾಚ್‌ಗಳು, 109 ಬ್ಯಾಂಕ್ ಚೆಕ್‌ಗಳು, 42 ಖಾಲಿ ಛಾಪಾ ಕಾಗದ, 85 ಸೇಲ್‌ ಡೀಡ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ಆಸ್ತಿ ವಿವರ ಸಂಗ್ರಹ: ‘ರೌಡಿಗಳು, ಅಪರಾಧ ಹಿನ್ನೆಲೆಯುಳ್ಳವರು ಹಾಗೂ ಪ್ರಭಾವಿಗಳು, ಮೀಟರ್ ಬಡ್ಡಿ ದಂಧೆಯಲ್ಲಿ ತೊಡಗಿದ್ದರು. ಸಾರ್ವಜನಿಕರಿಗೆ ಸಾಲ ನೀಡಿ ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದರು. ಬಡ್ಡಿ ನೀಡದಿದ್ದರೆ, ಚಿತ್ರಹಿಂಸೆ ನೀಡುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

‘ಮೀಟರ್ ಬಡ್ಡಿ ದಂಧೆಯಲ್ಲಿ ತೊಡಗಿದ್ದವರ ಆಸ್ತಿ ವಿವರ ಸಂಗ್ರಹಿಸಲಾಗುತ್ತಿದೆ. ಜೊತೆಗೆ, ನೊಂದವರಿಂದ ದೂರು ಪಡೆಯಲಾಗುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.