ADVERTISEMENT

ಬೆಂಗಳೂರು | ಸಂಭ್ರಮದ ವೀರಾಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2023, 14:44 IST
Last Updated 24 ಡಿಸೆಂಬರ್ 2023, 14:44 IST
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉತ್ತರಹಳ್ಳಿಯ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ವೀರಾಂಜನೇಯ ಸ್ವಾಮಿಯ ಚಿನ್ನ ಲೇಪಿತ ಬ್ರಹ್ಮರಥೋತ್ಸವವು ಭಾನುವಾರ ವಿಜೃಂಭಣೆಯಿಂದ ನಡೆಯಿತು
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉತ್ತರಹಳ್ಳಿಯ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ವೀರಾಂಜನೇಯ ಸ್ವಾಮಿಯ ಚಿನ್ನ ಲೇಪಿತ ಬ್ರಹ್ಮರಥೋತ್ಸವವು ಭಾನುವಾರ ವಿಜೃಂಭಣೆಯಿಂದ ನಡೆಯಿತು   

ಬೆಂಗಳೂರು : ನಗರದ ಉತ್ತರಹಳ್ಳಿಯ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ವೀರಾಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಭಾನುವಾರ ವೈಭವದಿಂದ ನಡೆಯಿತು.

ಬ್ರಹ್ಮರಥೋತ್ಸವದ ಅಂಗವಾಗಿ ಸ್ವಾಮಿಗೆ ಮಾಜಿ ಸಂಸದ ಎಂ. ಶ್ರೀನಿವಾಸ್‌ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅವರ ಕುಟುಂಬದ ವತಿಯಿಂದ ಸಮರ್ಪಿಸಲಾದ ಚಿನ್ನ ಲೇಪಿತ ರಥವನ್ನು ಉದ್ಘಾಟಿಸಲಾಯಿತು. ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿಯಾದರು.

ಮಧ್ಯಾಹ್ನ 12ಕ್ಕೆ ನೂತನ ರಥದಲ್ಲಿ ವೀರಾಂಜನೇಯ ಸ್ವಾಮಿ ಉತ್ಸವ ಮೂರ್ತಿಯನ್ನು  ಪ್ರತಿಷ್ಠಾಪಿಸಲಾಯಿತು.  ಧಾರ್ಮಿಕ ಪೂಜಾ ಕಾರ್ಯಗಳನ್ನು ನೆರವೇರಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಜೈ ಶ್ರೀರಾಮ್‌, ಜೈ ಹನುಮಾನ್‌ ಘೋಷಣೆಗಳು ಮುಗಿಲು ಮುಟ್ಟಿದವು. ವೀರಗಾಸೆ, ಡೊಳ್ಳುಕುಣಿತ, ಪೂಜಾ ಕುಣಿತ, ಕೀಲುಕುದುರೆ ಸೇರಿದಂತೆ ವಿವಿಧ ಜನಪದ ಕಲಾತಂಡಗಳು ರಥೋತ್ಸವಕ್ಕೆ ಮೆರಗು ನೀಡಿದವು.

ADVERTISEMENT

ಜನರು ಮನೆಗಳ ಮುಂದೆ ರಂಗೋಲಿ ಹಾಕಿ ರಥವನ್ನು ಸ್ವಾಗತಿಸಿ ಸ್ವಾಮಿಗೆ ಪೂಜೆ ಸಲ್ಲಿಸಿದರು. ಕಲಶಾರಾಧನೆ, ರಾಮತಾರಕ ಹೋಮ, ಆಂಜನೇಯ ಮೂಲಮಂತ್ರ ಹೋಮ, ರಥ ದೇವತಾ ಹೋಮ, ರಥ ದೇವತಾ ಪೂಜೆಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.