ರಾಜರಾಜೇಶ್ವರಿನಗರ: ’ಆರೋಗ್ಯವಾಗಿರುವ ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು’ ಎಂದು ಕೇಂದ್ರದ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು.
ಉಲ್ಲಾಳ ವಾರ್ಡ್ ಬಿಜೆಪಿ ಘಟಕ, ಯುವ ಮೋರ್ಚಾ, ಮಹಿಳಾ ಮೋರ್ಚಾ ವತಿಯಿಂದ ಭುವನೇಶ್ವರಿ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ, ರಕ್ತದಾನ ಮಾಡಿ ಅವರು ಮಾತನಾಡಿದರು.
ಕೆಂಗೇರಿ ಪುರಸಭೆ ಮಾಜಿ ಉಪಾಧ್ಯಕ್ಷ ಜಿ. ಮುನಿರಾಜು, ಉಲ್ಲಾಳ್ ವಾರ್ಡ್ ಬಿಜೆಪಿ ಅಧ್ಯಕ್ಷ ಟಿ. ಜಯರಾಮ, ಯಶವಂತಪುರ ನಗರ ಮಂಡಲ ಅಧ್ಯಕ್ಷ ಅನಿಲ್ ಚಳಗೇರಿ, ಯುವ ಮೋರ್ಚಾ ಬಿಜೆಪಿ ಅಧ್ಯಕ್ಷ ವಿ. ನಾಗರಾಜು ರಕ್ತದಾನ ಮಾಡಿದರು.
ಶಿಬಿರದಲ್ಲಿ 48 ಮಂದಿ ರಕ್ತದಾನ ಮಾಡಿದರು. ನೂರಕ್ಕೂ ಹೆಚ್ಚು ಜನರು ಆರೋಗ್ಯ ತಪಾಸಣೆಗೊಳಗಾದರು.
ಪಾಲಿಕೆ ಮಾಜಿ ಸದಸ್ಯರಾದ ರ.ಅಂಜನಪ್ಪ, ವಿ.ವಿ.ಸತ್ಯನಾರಾಯಣ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆರ್.ಪಿ. ಪ್ರಕಾಶ್, ದುಬಾಸಿಪಾಳ್ಯ ರಾಮು, ಗಂಗಾ, ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವಾತಿ .ಆರ್, ಜಿಲ್ಲಾ ಸಮಿತಿ ಸದಸ್ಯರಾದ ಕದರಪ್ಪ, ಪ್ರೇಮ ನಾಗಯ್ಯ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಫಲಾನುಭವಿಗಳ ಪ್ರಕೋಷ್ಟ ಅಧ್ಯಕ್ಷೆ ಆಶಾ ಲೋಹಿತ್, ಮಂಡಲ ಅಧ್ಯಕ್ಷೆ ರೂಪ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.