ಬೆಂಗಳೂರು: ‘ಮಹಿಳೆಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠ ಕಾನ್ಸರ್ ನಿಯಂತ್ರಣಕ್ಕೆ ತಪಾಸಣೆ, ಲಸಿಕೆ ಮತ್ತು ಆರಂಭಿಕ ಹಂತದ ಚಿಕಿತ್ಸೆಗೆ ಆದ್ಯತೆ ನೀಡಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಫೈಂಡ್ ಸಂಸ್ಥೆ ಜಂಟಿಯಾಗಿ ಗರ್ಭಕಂಠ ಕ್ಯಾನ್ಸರ್ ತಪಾಸಣೆ ಬಗ್ಗೆ ನಗರದಲ್ಲಿ ಹಮ್ಮಿಕೊಂಡ ಸಮಾಲೋಚನೆ ಸಭೆ ಉದ್ಘಾಟಿಸಿ, ಮಾತನಾಡಿದರು.
‘ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಮಾರ್ಗಸೂಚಿ ರೂಪಿಸಲಾಗುವುದು. 30 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ತಪಾಸಣೆಗೆ ಅವಕಾಶ ಕಲ್ಪಿಸಿಕೊಡಲು, 9ರಿಂದ 14 ವರ್ಷದೊಳಗಿನ ಎಲ್ಲಾ ಹೆಣ್ಣು ಮಕ್ಕಳಿಗೆ ಸಾರ್ವತ್ರಿಕ ಲಸಿಕೆ ನೀಡಲು ಮಾರ್ಗೋಪಾಯಗಳನ್ನು ರೂಪಿಸಲಾಗುತ್ತಿದೆ’ ಎಂದು ಹೇಳಿದರು.
ಫೈಂಡ್ ಸಂಸ್ಥೆಯ ಉಪಾಧ್ಯಕ್ಷ ಸಂಜಯ್ ಸರಿನ್, ‘ಗರ್ಭಕಂಠದ ಕ್ಯಾನ್ಸರ್ ನಿರ್ಮೂಲನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ವಿ. ಲೋಕೇಶ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.