ADVERTISEMENT

ಚೆಕ್‌ಪೋಸ್ಟ್: ಪಾನಮತ್ತ 83 ಚಾಲಕರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2024, 16:33 IST
Last Updated 5 ಏಪ್ರಿಲ್ 2024, 16:33 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಚುನಾವಣೆ ಅಕ್ರಮ ತಡೆಗಾಗಿ ನಗರದ ಹಲವು ಕಡೆ ಚೆಕ್‌ಪೋಸ್ಟ್ ಮೂಲಕ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಪಾನಮತ್ತರಾಗಿ ವಾಹನ ಚಲಾಯಿಸುವ ಚಾಲಕರ ಪತ್ತೆಗೂ ಚೆಕ್‌ಪೋಸ್ಟ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

‘ಲೋಕಸಭಾ ಚುನಾವಣೆ ನಿಮಿತ್ತ ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ. ಕರ್ತವ್ಯದಲ್ಲಿರುವ ಪೊಲೀಸರು, ವಾಹನಗಳ ಚಾಲಕರನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಮದ್ಯ ಕುಡಿದು ವಾಹನ ಚಲಾಯಿಸುತ್ತಿದ್ದ 83 ಚಾಲಕರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದರು.

ADVERTISEMENT

‘ಇದುವರೆಗೂ 6,860 ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ಮುಂದುವರಿಯಲಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.