ಬೆಂಗಳೂರು: ‘ಸಂಶೋಧಕ ಚಿದಾನಂದಮೂರ್ತಿ ಅವರು ಸಂಶೋಧಕರು ಮಾತ್ರವಲ್ಲ ಸರಳತೆ, ಪ್ರಾಮಾಣಿಕತೆಗೆ ಹೆಸರಾದ ಭಾವಜೀವಿ’ ಎಂದು ಸಂಶೋಧಕ ಡಾ.ಆರ್.ಶೇಷಶಾಸ್ತ್ರಿ ಹೇಳಿದರು.
ಜಯನಗರದ ಜೈನ್ ವಿಶ್ವವಿದ್ಯಾಲಯದ ಕನ್ನಡ ವಿಭಾಗವು ಆಯೋಜಿಸಿದ್ದ ‘ಕನ್ನಡ ಸಂಸ್ಕೃತಿಗೆ ಡಾ. ಎಂ. ಚಿದಾನಂದಮೂರ್ತಿ ಅವರ ಕೊಡುಗೆ ಮತ್ತು ಕನ್ನಡ ಸಾಹಿತ್ಯದ ವಿವಿಧ ಆಯಾಮಗಳು’ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಲೇಖಕಿ ಡಾ. ದೀಪಾ ಪಡ್ಕೆ ಅವರು ಭಜನಾ ಸಾಹಿತ್ಯದ ಕುರಿತು ವಿಚಾರ ಮಂಡಿಸಿದರು. ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ರಾಜೇಶ್ವರಿ ವೈ.ಎಂ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.