ADVERTISEMENT

ಜಿಎಸ್‌ಟಿ–ಟೆಂಡರ್: ರದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2024, 0:24 IST
Last Updated 4 ಜೂನ್ 2024, 0:24 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ಜಿಎಸ್‌ಟಿ ಮೊತ್ತ ಸೇರಿಸಿ ಟೆಂಡರ್‌ ಕರೆಯುವುದನ್ನು ರದ್ದುಪಡಿಸಲು ಆರ್ಥಿಕ ಇಲಾಖೆಗೆ ನಿರ್ದೇಶಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಸೋಮವಾರ ಭೇಟಿಯಾದರು.

ADVERTISEMENT

‘2017–18ರ  ಹೆಚ್ಚುವರಿ ಜಿಎಸ್‌ಟಿಯನ್ನು ಸರ್ಕಾರದ ವತಿಯಿಂದ ಪಾವತಿಸುವ ಬಗ್ಗೆಯೂ ಆರ್ಥಿಕ ಇಲಾಖೆಯವರು ಪರಿಶೀಲಿಸಬೇಕೆಂದು ನಿರ್ದೇಶನ ನೀಡಿದರು ಎಂದು ಸಂಘದ ಅಧ್ಯಕ್ಷ ಜಿ.ಎಂ. ನಂದಕುಮಾರ್‌ ತಿಳಿಸಿದರು.

‘ಬಿಬಿಎಂಪಿ ಗುತ್ತಿಗೆದಾರರ 9 ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರನ್ನು ಕರೆದು ಮಾತನಾಡುವುದಾಗಿ ಭರವಸೆ ನೀಡಿದರು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.