ADVERTISEMENT

ಎಬಿ–ಎಆರ್‌ಕೆ ಹೊಸ ಕಾರ್ಡ್‌ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2023, 16:17 IST
Last Updated 6 ಡಿಸೆಂಬರ್ 2023, 16:17 IST
ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಾನುಭವಿ ಮಹಿಳೆಯರಿಗೆ ಆಯುಷ್ಮಾನ್‌ ಭಾರತ್‌– ಆರೋಗ್ಯ ಕರ್ನಾಟಕ ಕಾರ್ಡ್‌  ವಿತರಿಸಿದರು. ಸಚಿವ ದಿನೇಶ್‌ ಗುಂಡೂರಾವ್‌ ಉಪಸ್ಥಿತರಿದ್ದರು. 
ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಾನುಭವಿ ಮಹಿಳೆಯರಿಗೆ ಆಯುಷ್ಮಾನ್‌ ಭಾರತ್‌– ಆರೋಗ್ಯ ಕರ್ನಾಟಕ ಕಾರ್ಡ್‌  ವಿತರಿಸಿದರು. ಸಚಿವ ದಿನೇಶ್‌ ಗುಂಡೂರಾವ್‌ ಉಪಸ್ಥಿತರಿದ್ದರು.    

ಬೆಳಗಾವಿ: ಆಯುಷ್ಮಾನ್‌ ಭಾರತ್‌– ಆರೋಗ್ಯ ಕರ್ನಾಟಕ (ಎಬಿ–ಎಆರ್‌ಕೆ) ಫಲಾನುಭವಿಗಳಿಗೆ ವಿತರಿಸಲು ಆರೋಗ್ಯ ಇಲಾಖೆ ರೂಪಿಸಿರುವ ನೂತನ ಕಾರ್ಡ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದರು.

ಹೊಸ ಕಾರ್ಡ್‌ಗಳಿಗೆ ‘ಆಯುಷ್ಮಾನ್‌ ಭಾರತ್‌– ಪ್ರಧಾನಮಂತ್ರಿ ಜನಾರೋಗ್ಯ– ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ ಕಾರ್ಡ್‌ ಎಂದು ಹೆಸರಿಸಲಾಗಿದೆ. ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ಗುರುತಿನ ಚೀಟಿಯೊಂದಿಗೆ ಜೋಡಿಸಲಾಗುತ್ತದೆ.

ಹೊಸ ಕಾರ್ಡ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ‘ಆಯುಷ್ಮಾನ್‌ ಭಾರತ್ - ಆರೋಗ್ಯ ಕರ್ನಾಟಕ ಕಾರ್ಡ್‌ನಲ್ಲಿ ಕೆಲವು ಬದಲಾವಣೆ ತರಲಾಗಿದೆ. ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್‌ಗಳನ್ನು ವಿತರಿಸುವ ಗುರಿ ಇದೆ’ ಎಂದರು.

ADVERTISEMENT

ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ₹ 5 ಲಕ್ಷದವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೂ ಈ ಯೋಜನೆಯಡಿ ಸೌಲಭ್ಯ ಒದಗಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಎಪಿಎಲ್‌ ಕುಟುಂಬಗಳ ಫಲಾನುಭವಿಗಳು ಚಿಕಿತ್ಸಾ ವೆಚ್ಚದ ಶೇ 70ರಷ್ಟನ್ನು ಭರಿಸಿದರೆ, ರಾಜ್ಯ ಸರ್ಕಾರ ಶೇ 30ರಷ್ಟನ್ನು ನೀಡುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.