ADVERTISEMENT

ಕಟ್ಟಡ ಕುಸಿದ ಸ್ಥಳಕ್ಕೆ CM ಭೇಟಿ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 5:19 IST
Last Updated 24 ಅಕ್ಟೋಬರ್ 2024, 5:19 IST
<div class="paragraphs"><p>ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು</p></div>

ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು

   

ಪ್ರಜಾವಾಣಿ ಚಿತ್ರ

ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ADVERTISEMENT

ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರೊಬ್ಬರನ್ನು ಅಮಾನತು ಮಾಡಿದರೆ ಸಾಲದು. ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಕೊಟ್ಟ ಐಎಎಸ್ ಅಧಿಕಾರಿ ವಲಯ ಆಯುಕ್ತ, ಕಾರ್ಯಪಾಲಕ ಎಂಜಿನಿಯರ್ ಅವರಿಗೂ ನೋಟಿಸ್ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚಿಸಿದರು.

ಕಾರ್ಮಿಕ ಇಲಾಖೆಯಿಂದ ತಲಾ ₹ 3 ಲಕ್ಷ, ಬಿಬಿಎಂಪಿಯಿಂದ ತಲಾ ₹ 2 ಲಕ್ಷ ಪರಿಹಾರವನ್ನು ಮೃತರ ಕುಟುಂಬಕ್ಕೆ ನೀಡಲಾಗುತ್ತದೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸಂಪೂರ್ಣವಾಗಿ ಇಲಾಖೆಗಳಿಂದಲೇ ಭರಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.