ADVERTISEMENT

ಗುತ್ತಿಗೆದಾರ ಆತ್ಮಹತ್ಯೆ | ತನಿಖಾ ಸಮಿತಿ ನೇಮಿಸಲು ಸೂಚನೆ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 31 ಮೇ 2024, 17:51 IST
Last Updated 31 ಮೇ 2024, 17:51 IST
<div class="paragraphs"><p>ಪ್ರಿಯಾಂಕ್ ಖರ್ಗೆ</p></div>

ಪ್ರಿಯಾಂಕ್ ಖರ್ಗೆ

   

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ (ಕೆಆರ್‌ಐಡಿಎಲ್) ಬಾಕಿ ಪಾವತಿಯಾಗಿಲ್ಲ ಎಂಬ ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ಕುರಿತು ತನಿಖೆಗೆ ಹಿರಿಯ ಅಧಿಕಾರಿಗಳ ಸಮಿತಿ ರಚಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ಕೆಆರ್‌ಐಡಿಎಲ್‌ನಿಂದ ಬಾಕಿ ಪಾವತಿಯಾಗಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಬಂದಿವೆ. ಈ ಬಗ್ಗೆ ತನಿಖೆ ನಡೆಸಲು ಹಿರಿಯ ಅಧಿಕಾರಿಗಳ ಸಮಿತಿ ರಚಿಸಲು ಸೂಚಿಸಿದ್ದೇನೆ’ ಎಂದರು.

ADVERTISEMENT

‘ಇದು ಕೂಡ ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದ ರೀತಿಯದ್ದಾಗಿದೆ. ಈ ಗುತ್ತಿಗೆದಾರ ಕೈಗೊಂಡ ಕಾಮಗಾರಿಗಳಿಗೆ ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲೇ ಅನುಮೋದನೆ ನೀಡಲಾಗಿತ್ತು. ಸ್ಪಷ್ಟ ಮಾಹಿತಿ, ದಾಖಲೆ ಸಿಕ್ಕ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.