ADVERTISEMENT

ದರ್ಶನ್ ರಕ್ಷಣೆಗೆ ‘ಕೈ–ಕಮಲ’ ನಾಯಕರಿಂದ ಕರೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 9:16 IST
Last Updated 14 ಜೂನ್ 2024, 9:16 IST
<div class="paragraphs"><p>ನಟ ದರ್ಶನ್</p></div>

ನಟ ದರ್ಶನ್

   

ಬೆಂಗಳೂರು: ನಟ ದರ್ಶನ್‌ಗೆ ರಕ್ಷಣೆ ನೀಡುವಂತೆ ಅವರ ಜತೆಗೆ ನಿಕಟ ಬಾಂಧವ್ಯ ಹೊಂದಿರುವ ಹಲವು ರಾಜಕಾರಣಿಗಳು ಪೊಲೀಸರ ಮೇಲೆ ಒತ್ತಡ ಹಾಕಿದ್ದರು ಎಂಬುದು ಗೊತ್ತಾಗಿದೆ.

‘ರೇಣುಕಸ್ವಾಮಿ ಕೊಲೆಯಾದ ಬಳಿಕ  ದರ್ಶನ್, ಹಲವು ರಾಜಕಾರಣಿಗಳಿಗೆ ಕರೆ ಮಾಡಿದ್ದರು. ಈ ಪೈಕಿ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ಮುಖಂಡರು ಹಾಗೂ ಬಿಜೆಪಿಯ ಒಬ್ಬರು, ಹಿರಿಯ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ವಾಟ್ಸ್‌ಆ್ಯಪ್‌ ಮೂಲಕ 100ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದಾರೆ. ಆದರೆ, ಹಿರಿಯ ಅಧಿಕಾರಿ ಕರೆ ಸ್ವೀಕರಿಸಿಲ್ಲ. ಇದರಿಂದ ಸಿಟ್ಟಾದ ಮುಖಂಡರು, ಗೃಹ ಸಚಿವರಿಗೆ ಕರೆ ಮಾಡಿರುವುದಾಗಿ ಗೊತ್ತಾಗಿದೆ’ ಎಂದು ಮೂಲಗಳು ಹೇಳಿವೆ.

ADVERTISEMENT

 ‘ಚಿತ್ರದುರ್ಗದ ರೇಣುಕಸ್ವಾಮಿ ಮರ್ಮಾಂಗಕ್ಕೆ ಹಲವು ಬಾರಿ ಒದ್ದು ಕೊಲೆ ಮಾಡಿದ್ದ ಆರೋಪ ಹೊತ್ತಿರುವ ನಟ ದರ್ಶನ್ ಮತ್ತು ಆತನ ಸಹಚರರು ಕೊಲೆ ಪ್ರಕರಣದಿಂದ ಪಾರಾಗಲು ಹಲವರಿಗೆ ಕೋಟಿ ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು’ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಆರೋಪಿಗಳನ್ನು ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ನಾನಾ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ವಿಚಾರಣೆ ವೇಳೆ ಅನೇಕ ಮಾಹಿತಿಗಳು ಬಯಲಿಗೆ ಬಂದಿವೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.