ADVERTISEMENT

ಕಾಂಗ್ರೆಸ್‌ನಿಂದ ಬ್ಲ್ಯಾಕ್‌ಮೇಲ್‌ ರಾಜಕಾರಣ: ಶಾಸಕ ಧೀರಜ್‌ ಮುನಿರಾಜು

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 16:17 IST
Last Updated 31 ಜನವರಿ 2024, 16:17 IST
<div class="paragraphs"><p>ಧೀರಜ್‌ ಮುನಿರಾಜು </p></div>

ಧೀರಜ್‌ ಮುನಿರಾಜು

   

ಬೆಂಗಳೂರು: ‘ಕಾಂಗ್ರೆಸ್‌ ಪಕ್ಷವು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತದಾರರನ್ನು ‘ಬ್ಲ್ಯಾಕ್‌ಮೇಲ್‌’ ಮಾಡಲು ಹೊರಟಿದೆ. ಕಾಂಗ್ರೆಸ್‌ ಶಾಸಕ ಎಚ್‌.ಸಿ. ಬಾಲಕೃಷ್ಣ ಅವರ ಹೇಳಿಕೆ ಬೆದರಿಕೆ ರಾಜಕಾರಣದ ಭಾಗವಾಗಿದೆ’ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಶಾಸಕ ಧೀರಜ್‌ ಮುನಿರಾಜು ಆರೋಪಿಸಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಇದು ಸಂವಿಧಾನ ವಿರೋಧಿ ನಡವಳಿಕೆ’ ಎಂದರು.

ADVERTISEMENT

‘ಯಾವುದೇ ಗ್ಯಾರಂಟಿ ಯೋಜನೆಯೂ ಸರಿಯಾಗಿ ಜಾರಿಯಾಗುತ್ತಿಲ್ಲ. ಜನರಿಗೆ ಈ ಯೋಜನೆಗಳ ಅನುಕೂಲ ದೊರಕುವುದನ್ನು ತಪ್ಪಿಸಲು ಬಿಪಿಎಲ್‌ ಪಡಿತರ ಚೀಟಿ ರದ್ದುಮಾಡಿ, ಎಪಿಎಲ್‌ ಪಡಿತರ ಚೀಟಿ ನೀಡುವ ಕೆಲಸ ಸದ್ದಿಲ್ಲದೇ ನಡೆಯುತ್ತಿದೆ’ ಎಂದು ದೂರಿದರು.

ಸರ್ಕಾರದ ಬೆಂಬಲ ಇದೆಯೆ?: ‘ಬಾಲಕೃಷ್ಣ ಅವರು ಮತದಾರರಿಗೆ ಬೆದರಿಕೆ ಹಾಕಿದ್ದಾರೆ. ರಾಜ್ಯ ಸರ್ಕಾರ ಈ ನಡೆಯನ್ನು ಬೆಂಬಲಿಸುತ್ತದೆಯೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಷ್ಟಪಡಿಸಬೇಕು’ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್‌. ರವಿಕುಮಾರ್‌ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.