ADVERTISEMENT

ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್‌ರಾಜ್ 2 ದಿನ ಸಿಸಿಬಿ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 12:36 IST
Last Updated 17 ನವೆಂಬರ್ 2020, 12:36 IST
ಸಂಪತ್‌ ರಾಜ್‌
ಸಂಪತ್‌ ರಾಜ್‌   

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಬಂಧಿಸಲಾಗಿರುವ ಕಾಂಗ್ರೆಸ್ ಮುಖಂಡರೂ ಆದ ಮಾಜಿ ಮೇಯರ್ ಸಂಪತ್‌ ರಾಜ್ ಅವರನ್ನು ಎರಡು ದಿನ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ಕೊರೊನಾ ಸೋಂಕು ತಗುಲಿರುವುದಾಗಿ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್‌ರಾಜ್, ಆಸ್ಪತ್ರೆಯಿಂದ ಏಕಾಏಕಿ ಬಿಡುಗಡೆ ಆಗಿ ಪರಾರಿಯಾಗಿದ್ದರು. ಇತ್ತ, ಸಂಪತ್‌ ರಾಜ್‌ ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಸಿಸಿಬಿ ಪೊಲೀಸರು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದರು.

ಸೋಮವಾರ ರಾತ್ರಿ ಮನೆಯಲ್ಲೇ ಸಂಪತ್‌ ರಾಜ್‌ ಅವರನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಮಂಗಳವಾರ ಮಧ್ಯಾಹ್ನ ನ್ಯಾಯಾಧೀಶರ ಎದುರು ಹಾಜರುಪಡಿಸಿದರು.

ADVERTISEMENT

‘ಪ್ರಕರಣದಲ್ಲಿ ಸಂಪತ್‌ ರಾಜ್ ಪ್ರಮುಖ ಆರೋಪಿ. ಅವರಿಂದ ಸಾಕಷ್ಟು ಮಾಹಿತಿ ಕಲೆ ಹಾಕಬೇಕಿದ್ದು, ಕಸ್ಟಡಿಗೆ ನೀಡಬೇಕು’ ಎಂದು ಸಿಸಿಬಿ ಪೊಲೀಸರು ನ್ಯಾಯಾಧೀಶರನ್ನು ಕೋರಿದರು. ಮನವಿ ಪುರಸ್ಕರಿಸಿದ ನ್ಯಾಯಾಧೀಶ, ಆರೋಪಿಯನ್ನು ಎರಡು ದಿನ ಸಿಸಿಬಿ ಕಸ್ಟಡಿಗೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.