ADVERTISEMENT

ಕಾಂಗ್ರೆಸ್ ನಾಯಕರು ಓಡಿಹೋಗಿದ್ದಾರೆ: ಆರ್‌.ಅಶೋಕ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2024, 21:12 IST
Last Updated 17 ಮಾರ್ಚ್ 2024, 21:12 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಪರ ಅಲೆ ಇರುವುದರಿಂದ ಕಾಂಗ್ರೆಸ್‌ನ ಸಚಿವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಧೈರ್ಯವಿಲ್ಲ. ಆ ಪಕ್ಷದ ನಾಯಕರು ಕಣದಿಂದ ಓಡಿಹೋಗಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ ವಾಗ್ದಾಳಿ ನಡೆಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಚೇರಿಯನ್ನು ಭಾನುವಾರ ಉದ್ಘಾಟಿಸಿ
ಸುದ್ದಿಗಾರರ ಜತೆ ಮಾತನಾಡಿ, ‘ಸಚಿವರು ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆ ಇತ್ತು. ಈಗ ಎಲ್ಲ ಸಚಿವರೂ ಬೆಂಗಳೂರಿನಿಂದ ಹಳ್ಳಿಗಳತ್ತ ಓಡಿಹೋಗಿದ್ದಾರೆ’ ಎಂದು
ಟೀಕಿಸಿದರು.

ಈ ಚುನಾವಣೆಯಲ್ಲಿ ಮೋದಿಯವರ ಪರವಾದ ಅಲೆ ಇದೆ. ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದೆ. ಜೆಡಿಎಸ್‌ ಜತೆಗಿನ ಮೈತ್ರಿಯೊಂದಿಗೆ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ಗುರಿ ಇದೆ ಎಂದರು.

ADVERTISEMENT

‘ಕಾಂಗ್ರೆಸ್‌ನಿಂದ ಭಯೋತ್ಪಾದನೆಗೆ ಬೆಂಬಲ’

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ‘ಕಾಂಗ್ರೆಸ್‌ ಅಧಿಕಾರದಲ್ಲಿ ಇರುವ ಕಡೆಗಳಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುತ್ತದೆ. ಬಿಜೆಪಿ ಭಯೋತ್ಪಾದನೆಯನ್ನು ನಿಗ್ರಹಿಸುತ್ತದೆ. ಹತ್ತು ವರ್ಷಗಳಿಂದ ಈಚೆಗೆ ದೇಶದಲ್ಲಿ ಭಯೋತ್ಪಾದಕರ ದಾಳಿಯಿಂದ ಸಾವಿಗೀಡಾದವರ ಸಂಖ್ಯೆ ಕಡಿಮೆಯಾಗಿರುವುದೇ ಇದಕ್ಕೆ ಸಾಕ್ಷಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.