ADVERTISEMENT

ವಿದ್ಯಾವಂತರಿಂದಲೇ ಹೆಚ್ಚುತ್ತಿರುವ ಭ್ರಷ್ಟಾಚಾರ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 16:17 IST
Last Updated 10 ಜುಲೈ 2024, 16:17 IST
ಸಂತೋಷ್ ಹೆಗ್ಡೆ 
ಸಂತೋಷ್ ಹೆಗ್ಡೆ    

ಬೆಂಗಳೂರು: ‘ವಿದ್ಯಾವಂತರಿಂದಲೇ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ವಿದ್ಯೆಯ ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ ನೀಡಬೇಕು’ ಎಂದು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದರು.

ವಿದ್ಯಾ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಭ್ರಷ್ಟಾಚಾರಿಗಳಿಗೆ ಕಾನೂನಿನ ಹೆದರಿಕೆ ಇಲ್ಲದಂತಾಗಿದೆ. ಯುವ ಸಮೂಹವು ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಿದೆ. ನ್ಯಾಯಾಲಯದಲ್ಲಿ ಒಂದು ಪ್ರಕರಣ ಇತ್ಯರ್ಥವಾಗಲು ಕನಿಷ್ಠ 10 ರಿಂದ 15 ವರ್ಷಗಳು ಬೇಕಾಗುತ್ತದೆ. ಆದ್ದರಿಂದ, ಸಮಾಜದಲ್ಲಿ ಈಗ ತುರ್ತು ಬದಲಾವಣೆಯ ಅಗತ್ಯವಿದೆ’ ಎಂದರು.

ADVERTISEMENT

ಶಿಕ್ಷಣ ತಜ್ಞ ಗುರುರಾಜ ಕರಜಗಿ, ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಸಾಲುಮರದ ತಿಮ್ಮಕ್ಕ, ಡಾ. ನಾ. ಸೋಮೇಶ್ವರ, ಸಂಸ್ಥೆಯ ಅಧ್ಯಕ್ಷ ಮಂಜೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಪವನ್ ಮಂಜೇಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.