ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ ಮತ್ತು ಶಿಕ್ಷಕರ ಏಳು ಕ್ಷೇತ್ರಗಳಿಗೆ 2024ರ ಜೂನ್‌ನಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ, ಪ್ರತಿ ಕ್ಷೇತ್ರಕ್ಕೂ ಒಬ್ಬ ಉಸ್ತುವಾರಿಯನ್ನು ನೇಮಿಸಿದೆ.
ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಎರಡೂ ಕ್ಷೇತ್ರಗಳಿಗೆ ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಶಾಸಕ ಆರ್. ಅಶೋಕ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಸದ ಡಿ.ವಿ. ಸದಾನಂದ ಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.