ADVERTISEMENT

ಸೂರಜ್‌ ರೇವಣ್ಣ ಕಸ್ಟಡಿಗೆ ನ್ಯಾಯಾಲಯಕ್ಕೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 20:00 IST
Last Updated 23 ಜೂನ್ 2024, 20:00 IST
<div class="paragraphs"><p>ಸೂರಜ್ ರೇವಣ್ಣ</p></div>

ಸೂರಜ್ ರೇವಣ್ಣ

   

ಬೆಂಗಳೂರು: ‘ಸೂರಜ್ ರೇವಣ್ಣ ಅವರ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿರುವ ಕಾರಣ ಹಾಸನ ಪೊಲೀಸರು ಆರೋಪಿಯನ್ನು ಕಸ್ಟಡಿಗೆ ಪಡೆದುಕೊಂಡಿಲ್ಲ. ಈಗ ಪ್ರಾಥಮಿಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜೊತೆಗೆ, ಆರೋಪಿ ಸೂರಜ್‌ ಅವರ ವಿಚಾರಣೆಯ ಅಗತ್ಯವಿದೆ. ಅವರನ್ನು ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು’ ಎಂದು ಸಿಐಡಿ ಮೂಲಗಳು ತಿಳಿಸಿವೆ.

‘ಈ ಪ್ರಕರಣವನ್ನು ಸಿಐಡಿಗೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್‌ ಅವರು ತನಿಖೆಗೆ ಡಿವೈಎಸ್‌ಪಿ ನೇತೃತ್ವದಲ್ಲಿ ತಂಡ ರಚಿಸಿದ್ದಾರೆ. ಸೋಮವಾರದಿಂದ ತಂಡದ ತನಿಖೆ ಶುರುವಾಗಲಿದೆ’ ಎಂದು ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.