ADVERTISEMENT

ನಿಯಮ ಉಲ್ಲಂಘನೆ: 1.34 ಲಕ್ಷ ಪ್ರಕರಣ, ₹ 3.26 ಕೋಟಿ ದಂಡ

​ಪ್ರಜಾವಾಣಿ ವಾರ್ತೆ
Published 14 ಮೇ 2021, 21:42 IST
Last Updated 14 ಮೇ 2021, 21:42 IST
ಬೆಂಗಳೂರಿನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿರುವ ಪೊಲೀಸ್ ಸಿಬ್ಬಂದಿ (ಸಾಂದರ್ಭಿಕ ಚಿತ್ರ)
ಬೆಂಗಳೂರಿನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿರುವ ಪೊಲೀಸ್ ಸಿಬ್ಬಂದಿ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಮಾಸ್ಕ್ ಹಾಕಿಕೊಳ್ಳದ ಹಾಗೂ ಅಂತರ ಕಾಯ್ದುಕೊಳ್ಳದವರ ವಿರುದ್ಧ ನಗರದ ಪೊಲೀಸರು 1.34 ಲಕ್ಷ ಪ್ರಕರಣ ದಾಖಲಿಸಿಕೊಂಡಿದ್ದು, ₹ 3.26 ಕೋಟಿ ದಂಡ ಸಂಗ್ರಹಿಸಿದ್ದಾರೆ.

‘ಕೊರೊನಾ ಸೋಂಕು ತಡೆಗಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಅದನ್ನು ಉಲ್ಲಂಘಿಸಿದವರನ್ನು ಪತ್ತೆ ಮಾಡಿ ದಂಡ ವಿಧಿಸಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಆಯಾ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಮಾರುಕಟ್ಟೆ, ಬಸ್ ತಂಗುದಾಣ, ಚೆಕ್‌ಪೋಸ್ಟ್ ಹಾಗೂ ಇತರೆಡೆಗಳಲ್ಲಿ ಸಿಬ್ಬಂದಿ ಸಂಚರಿಸುತ್ತಿದ್ದಾರೆ’ ಎಂದೂ ತಿಳಿಸಿದರು.

ADVERTISEMENT

‘ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೆಲವರ ವಿರುದ್ಧ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದೆ’ ಎಂದೂ ಅವರು ಹೇಳಿದರು.

19.505 ವಾಹನ ಜಪ್ತಿ: ನಗರದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದವರ 19,505 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

‘ಅಗತ್ಯ ವಸ್ತುಗಳ ಖರೀದಿ ಹಾಗೂ ತುರ್ತು ಸೇವೆಗಳಿಗೆ ಮಾತ್ರ ವಾಹನ ಬಳಸಲು ಅವಕಾಶವಿದೆ. ಅದನ್ನು ಹೊರತುಪಡಿಸಿ ಅನಗತ್ಯವಾಗಿ ಸಂಚರಿಸುವವರ ವಾಹನ ತಡೆದು ಜಪ್ತಿ ಮಾಡಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿ ಹೇಳಿದರು.

‘ಇದುವರೆಗೂ 17,696 ದ್ವಿಚಕ್ರ ವಾಹನ, 869 ಆಟೊ ಹಾಗೂ 940 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಠಾಣೆ ವ್ಯಾಪ್ತಿಯಲ್ಲೇ ಅವುಗಳನ್ನು ನಿಲುಗಡೆ ಮಾಡಲಾಗಿದೆ. ನ್ಯಾಯಾಲಯದ ಮೂಲಕವೇ ವಾಹನಗಳನ್ನು ಬಿಡಿಸಿಕೊಳ್ಳಬೇಕು' ಎಂದೂ ಅಧಿಕಾರಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.