ಬೆಂಗಳೂರು: ಮಾದಕ ವಸ್ತುಗಳಾದ ಗಾಂಜಾ ಹಾಗೂ ಎಂಡಿಎಂಎ ಸಾಗಿಸುತ್ತಿದ್ದ ಇಬ್ಬರನ್ನು ಬೆಂಗಳೂರು ಉತ್ತರ ವಿಭಾಗದ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.
‘ಆರೋಪಿಗಳು ಕೇರಳ ನೋಂದಣಿ ಸಂಖ್ಯೆಯ ಬೈಕ್ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಇಬ್ಬರೂ ಸಿಕ್ಕಿಬಿದ್ದರು’.
‘ಆರೋಪಿಗಳ ಬಳಿ ಪತ್ತೆಯಾದ₹4.40 ಲಕ್ಷ ಮೌಲ್ಯದ 10 ಕೆ.ಜಿಯಷ್ಟು ಗಾಂಜಾ ಹಾಗೂ 5 ಗ್ರಾಂ. ಎಂಡಿಎಂಎ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಯಿತು. ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.