ಬೆಂಗಳೂರು: ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿರುವ ಹುಕ್ಕಾ ಬಾರ್ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
‘ಅಕ್ರಮವಾಗಿ ಹುಕ್ಕಾ ಬಾರ್ ಆರಂಭಿಸಿದ್ದ ಬಗ್ಗೆ ಮಾಹಿತಿ ಬಂದಿತ್ತು. ದಾಳಿ ಮಾಡಿ, ₹50 ಸಾವಿರ ಮೌಲ್ಯದ 8 ಚಿಲುಮೆಗಳು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.
‘ಕಾಲೇಜು ಯುವಕ–ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಹುಕ್ಕಾ ಬಾರ್ಗೆ ಬರುತ್ತಿದ್ದರು. ಅಪ್ರಾಪ್ತರಿಗೂ ಹುಕ್ಕಾ ಕೊಟ್ಟು ವ್ಯಸನಿಗಳನ್ನಾಗಿ ಮಾಡಲಾಗುತ್ತಿತ್ತು’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.