ಬೆಂಗಳೂರು: ಸಂಸ್ಕೃತಿ ಸಚಿವಾಲಯದ ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ ನಡೆಸಿದ ಯುವ ಪ್ರತಿಭಾ ಶೋಧದಲ್ಲಿ ಇಲ್ಲಿನ ಜಾನಪದ ಹಾಗೂ ಯಕ್ಷಗಾನ ಕಲಾವಿದೆ ಅದಿತಿ ಉರಾಳ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕುಂದಾಪುರದ ಕೋಟ ಗ್ರಾಮದ ಉರಾಳದವರಾಗಿದ್ದಾರೆ. ಯಕ್ಷಗಾನ ಕಲಾವಿದ, ಕಲಾಕದಂಬ ಆರ್ಟ್ ಸೆಂಟರ್ ಸಾಂಸ್ಕೃತಿಕ ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಉರಾಳ ಹಾಗೂ ಶಿಕ್ಷಕಿ ಮಮತಾ ಉರಾಳ ಅವರ ಮಗಳಾಗಿದ್ದು, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.
ಜಾನಪದ, ರಂಗಭೂಮಿ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಇವರು ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.