ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 23 ಐ–ಫೋನ್‌ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯಿಂದ ₹ 34.47 ಲಕ್ಷ ಮೌಲ್ಯದ 23 ಐ-ಫೋನ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಶನಿವಾರ ಬ್ಯಾಂಕಾಕ್‌ನಿಂದ ನಗರಕ್ಕೆ ಪ್ರಯಾಣಿಕರೊಬ್ಬರು ತಮ್ಮ ಲಗೇಜ್‌ನಲ್ಲಿ ಐ–ಫೋನ್ ಸಾಗಾಟ ಮಾಡುತ್ತಿದ್ದ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಸಿಕ್ಕಿತ್ತು. ಬಂದಿಳಿಯುತ್ತಿದ್ದಂತೆ ಆರೋಪಿಯನ್ನು ವಶಕ್ಕೆ ಪಡೆದು,ಪರಿಶೀಲನೆ ನಡೆಸಲಾಯಿತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.