ಬೆಂಗಳೂರು: ಅಂಡರ್ ಪಾಸ್‌ಗಳಲ್ಲಿ ಉಂಟಾಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಯೋಜನೆ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೆ.ಆರ್ ವೃತ್ತದ ಬಳಿಯ ಅಂಡರ್ ಪಾಸ್‌ನಲ್ಲಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ‘ಮುನ್ನೆಚ್ಚರಿಕೆ ಕ್ರಮವಾಗಿ ಇಂತಹ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ತಡೆಯಬೇಕಿದೆ. ಇಲ್ಲಿ ಕ್ಯಾಮೆರಾ ಅಳವಡಿಕೆಗೂ ಸೂಚನೆ ನೀಡಲಾಗುವುದು’ ಎಂದರು.
‘ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬಹುದು ಎಂದು ಚರ್ಚಿಸಿ ಯೋಜನೆ ರೂಪಿಸಲಾಗುವುದು. ಈ ಘಟನೆಯಲ್ಲಿ ಸಾವಿನ ದವಡೆಯಲ್ಲಿದ್ದ ನಾಲ್ಕೈದು ಮಂದಿಯನ್ನು ರಕ್ಷಣೆ ಮಾಡಿದ ಮಾಧ್ಯಮದವರು, ಸಾರ್ವಜನಿಕರು ಹಾಗೂ ಪೊಲೀಸರಿಗೆ ಧನ್ಯವಾದ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.