ಬೆಂಗಳೂರು: ಖಾಸಗಿ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಕೌಂಟೆಂಟ್, ಹೊಸರೋಡ್ ನಿವಾಸಿ ಕಾರ್ತಿಕೇಯನ್(30) ಆತಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೋಷಕರೊಂದಿಗೆ ವಾಸವಾಗಿದ್ದ ಕಾರ್ತಿಕೇಯನ್ ಅವರು ತಮಿಳುನಾಡು ಮೂಲದ ಅವಿನ್ ಎಂಬ ಖಾಸಗಿ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಿದ್ದರು.
‘ಬುಧವಾರ ತಡರಾತ್ರಿ ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಬೆಳಿಗ್ಗೆ ಪೋಷಕರು ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.