ಬೆಂಗಳೂರು: ಚಿತ್ರದುರ್ಗದ ರೇಣುಕುಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಗರ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
‘ಮೇಲ್ಮನವಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಇಂಗ್ಲಿಷ್‌ಗೆ ಅನುವಾದಿಸುವ ಕೆಲಸಗಳು ನಡೆಯುತ್ತಿವೆ’ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
‘ಆದಷ್ಟು ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಾಗುವುದು. ಪ್ರಾಸಿಕ್ಯೂಷನ್ ಪರ ವಕೀಲರ ಜತೆಗೆ ಚರ್ಚಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಹೇಳಿದರು.
ಬೆನ್ನು ನೋವಿನ ಚಿಕಿತ್ಸೆಗೆ ಒಳಗಾಗಲು ದರ್ಶನ್ ಅವರು ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದಿದ್ದರು. ಸದ್ಯ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.