ಬೆಂಗಳೂರು: 2020–21ನೇ ಸಾಲಿಗೆ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ದಾಖಲಾತಿ ಹಾಗೂ ಕಾಲೇಜು ಬದಲಾವಣೆಯ ಕೊನೆಯ ದಿನವನ್ನು ಜ. 8ರವರೆಗೆ ವಿಸ್ತರಿಸಲಾಗಿದೆ.
‘ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಪರಿಗಣಿಸಿ ಈ ಹಿಂದೆ ಡಿ. 24ರವರೆಗೆ ವಿಸ್ತರಿಸಲಾಗಿತ್ತು. ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.