ADVERTISEMENT

ಅಕಾಡೆಮಿ, ನಿಗಮಗಳ ಅಧ್ಯಕ್ಷರ ಜತೆ ಡಿಕೆಶಿ ಸಭೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 16:25 IST
Last Updated 14 ಜೂನ್ 2024, 16:25 IST
ಸಭೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ‍ಪಕ್ಷದ ನಾಯಕರಾದ ಮೊಹಮ್ಮದ್ ನಲಪಾಡ್, ರುಕ್ಸಾನಾ ಉಸ್ತಾದ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ನಾರಾಯಣಸ್ವಾಮಿ, ಮುರುಳೀಧರ ಹಾಲಪ್ಪ ಉಪಸ್ಥಿತರಿದ್ದರು.
ಸಭೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ‍ಪಕ್ಷದ ನಾಯಕರಾದ ಮೊಹಮ್ಮದ್ ನಲಪಾಡ್, ರುಕ್ಸಾನಾ ಉಸ್ತಾದ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ನಾರಾಯಣಸ್ವಾಮಿ, ಮುರುಳೀಧರ ಹಾಲಪ್ಪ ಉಪಸ್ಥಿತರಿದ್ದರು.   

ಬೆಂಗಳೂರು: ವಿವಿಧ ಸಾಂಸ್ಕೃತಿಕ ಅಕಾಡೆಮಿಗಳು ಹಾಗೂ  ನಿಗಮ ಮಂಡಳಿಗಳ ಅಧ್ಯಕ್ಷರ ಜತೆಗೆ ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಈ ಹುದ್ದೆಗಳು ರಾಜಕಾರಣಕ್ಕೆ ಮೆಟ್ಟಿಲುಗಳಾಗಿದ್ದು, ಕೈ ಮತ್ತು ಬಾಯಿ ಶುದ್ಧವಾಗಿರಬೇಕು’ ಎಂದು ಕಿವಿಮಾತು ಹೇಳಿದರು. 

ಚುನಾವಣೆ ನೀತಿ ಸಂಹಿತೆ ಕೊನೆಗೊಂಡಿದ್ದರಿಂದ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು ಗುರುವಾರ ಅಧಿಕಾರ ಸ್ವೀಕರಿಸಿದ್ದರು. ಇವರನ್ನು ಒಳಗೊಂಡಂತೆ ನಿಗಮ ಮಂಡಳಿಗಳ ಅಧ್ಯಕ್ಷರ ಜತೆಗೆ ಪ್ರಥಮ ಸಭೆ ನಡೆಸಿದ ಅವರು, ‘ಜನರ ಭಾವನೆಯನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಅಧ್ಯಕ್ಷ ಹುದ್ದೆಯು ಗೌರವಾನ್ವಿತ ಸ್ಥಾನವಾಗಿದ್ದು, ಹಗರಣಗಳಿಂದ ಅಂತರ ಕಾಯ್ದುಕೊಳ್ಳಬೇಕು. ಈ ಹಿಂದೆ ಹಗರಣಗಳು ನಡೆದಿದ್ದರೆ ಅದನ್ನು ಗಮನಕ್ಕೆ ತರಬೇಕು’ ಎಂದು ತಿಳಿಸಿದರು. 

‘ವಿಧಾನಸಭೆ ಚುನಾವಣೆಯಲ್ಲಿ 87 ಕ್ಷೇತ್ರದಲ್ಲಿ ಸೋತಿದ್ದೇವೆ. ಈ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಉತ್ತಮವಾಗಿ ಕೆಲಸ ಮಾಡಬೇಕು. ವಿರೋಧಿಗಳು ನಮ್ಮನ್ನು ಸಿಲುಕಿಸಲು ಪ್ರಯತ್ನ ಮಾಡುತ್ತಾ ಇರುತ್ತಾರೆ. ಆದ್ದರಿಂದ ಬುದ್ಧಿವಂತಿಕೆಯಿಂದ ನಾವು ಕೆಲಸ ಮಾಡಬೇಕು’ ಎಂದರು. 

ADVERTISEMENT

ಸಾಹಿತ್ಯ, ನಾಟಕ ಸೇರಿ ವಿವಿಧ ಅಕಾಡೆಮಿಗಳ ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರು ಉತ್ತಮವಾಗಿ ಕಾರ್ಯನಿರ್ವಹಿಸುವ ಬಗ್ಗೆ ಭರವಸೆ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.